ಖಾಸಗಿ ಶಾಲೆಗಳಲ್ಲಿ ಹೆಚ್ಚುತ್ತಿರುವ ಡೊನೆಷನ್ ಹಾವಳಿಯಿಂದ ಗ್ರಾಮೀಣ ಬಡ, ಕೂಲಿ ಕಾರ್ಮಿಕ ಹಾಗೂ ದಲಿತ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಅನೇಕ ಸಮಸ್ಯೆಗಳಿವೆ. ಸಿರಿವಾರ, ಬೈಲಕುಂಪುರ, ಅಡವಿಬಾವಿ ತಾಂಡಾ, ದೇವಲಾಪುರ, ಬಂಕಾಪುರ, ಕರಡಿಗುಡ್ಡ ಸೇರಿ ವಿವಿಧೆಡೆ ಶಾಲಾ-ಕಾಲೇಜು ಸಮಯಕ್ಕೆ ಬಸ್ ಸೌಲಭ್ಯವಿಲ್ಲ. ಆದ್ದರಿಂದ ತಾಲೂಕಿನ ಶೈಕ್ಷಣಿಕ ಪರಿಸ್ಥಿತಿ ಪರಿಶೀಲಿಸಿ, ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.