ಸ್ವ ಉದ್ಯೋಗಕ್ಕೆ ಸಾಲ ಸೌಲಭ್ಯ ಕಲ್ಪಿಸಿ

ಕೊಪ್ಪಳ ಜಿಪಂ ಸಮಿತಿ ಸಭಾಂಗಣದಲ್ಲಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ವಣಿತ್ ನೇಗಿ ವಾತನಾಡಿದರು. ಪ್ರಮುಖರಾದ ವಾರುತಿ ಕೆ., ರಾಯೇಶ್ವರ ಪೈ, ತಾರಕೇಶ್ವರ, ವೀರೇಶ್ ಇದ್ದರು.
ಕೊಪ್ಪಳ ಜಿಪಂ ಸಮಿತಿ ಸಭಾಂಗಣದಲ್ಲಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ವಣಿತ್ ನೇಗಿ ವಾತನಾಡಿದರು. ಪ್ರಮುಖರಾದ ವಾರುತಿ ಕೆ., ರಾಯೇಶ್ವರ ಪೈ, ತಾರಕೇಶ್ವರ, ವೀರೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಇಒ ವರ್ಣಿತ್ ನೇಗಿ ಸೂಚನೆ
  • ಎಸ್‌ಬಿಐ ಆರ್‌ಸೆಟ್‌ಇ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ
ಕೊಪ್ಪಳ: ಎಸ್‌ಬಿಐ ಆರ್‌ಸೆಟ್‌ಇ ಸಂಸ್ಥೆಯಲ್ಲಿ ತರಬೇತಿ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳಿಗೆ ಸ್ವ-ಉದ್ಯೋಗ ಪ್ರಾರಂಭಿಸಲು ಅಗತ್ಯ ಸಾಲ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಜಿಪಂ ಸಿಇಒ ವರ್ಣಿತ್ ನೇಗಿ ಸೂಚನೆ ನೀಡಿದರು.
ಜಿಪಂ ಸಮಿತಿ ಸಭಾಂಗಣದಲ್ಲಿ ಬುಧವಾರ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ವಾತನಾಡಿದರು.
ವಿವಿಧ ಇಲಾಖೆಗಳ ನಾನಾ ಯೋಜನೆಗಳಡಿ ಹೊಸ ತರಬೇತಿ ಕಾರ್ಯಾಗಾರಗಳನ್ನು ಆರ್‌ಸೆಟ್‌ಇ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಳ್ಳಲು ಕ್ರಮ ವಹಿಸಿ. ಸಾರ್ವಜನಿಕರ ಆಸಕ್ತಿಗೆ ಅನುಗುಣವಾಗಿ ವಿಷಯ ಆಯ್ಕೆ ವಾಡಿಕೊಂಡು ತರಬೇತಿ ನೀಡಿ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿದ ನಿರುದ್ಯೋಗಿ ಅಭ್ಯರ್ಥಿಗಳ ಪಟ್ಟಿ ಪಡೆದು, ಅಭ್ಯರ್ಥಿಗಳನ್ನು ಸಂಪರ್ಕಿಸಿ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತರಬೇತಿ ನೀಡಿ. ಸ್ವಯಂ ಉದ್ಯೋಗ ಕೈಗೊಳ್ಳಲು ಸಂಸ್ಥೆ ಹಾಗೂ ಲೀಡ್ ಬ್ಯಾಂಕ್‌ನಿಂದ ಅಗತ್ಯ ಅನುಕೂಲ ವಾಡಿಕೊಡಬೇಕು. ಇದರ ಜತೆಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸಹಾಯಧನ, ಸಾಲ ಸೌಲಭ್ಯಗಳ ಬಗ್ಗೆ ವಾಹಿತಿ ನೀಡಬೇಕು ಎಂದು ತಿಳಿಸಿದರು.
ತರಬೇತಿ ಕೇಂದ್ರದಲ್ಲಿ ಅಗತ್ಯ ಸೌಕರ್ಯ ಒದಗಿಸುವುದರ ಜತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ. ಅಭ್ಯರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ಹೇಳಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಾರುತಿ ಕೆ., ಆರ್‌ಸೆಟಿ ನಿರ್ದೇಶಕ ರಾಯೇಶ್ವರ ಪೈ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ತಾರಕೇಶ್ವರ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗಾಧಿಕಾರಿ ವೀರೇಶ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಹಾದೇವ ಕೀರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net