ಹೈನುಗಾರಿಕೆ, ಕೋಳಿ ಹಾಗೂ ಕುರಿ ಸಾಗಾಣಿಕೆ, ಜೇನು ಕೃಷಿ, ಅಣಬೆ ಕೃಷಿ, ಟೈಲರಿಂಗ್, ಉಪ್ಪಿನಕಾಯಿ ತಯಾರಿಕೆ, ಮೊಬೈಲ್ ರಿಪೇರಿ ಸೇರಿದಂತೆ ಸಾರ್ವಜನಿಕರ ಆಸಕ್ತಿಗೆ ಅನುಗುಣವಾಗಿ ತರಬೇತಿ ವಿಷಯಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಿ. ಸಂಸ್ಥೆಯಲ್ಲಿ ತರಬೇತಿ ಪಡೆದ ಯುವಜನರಿಗೆ ಉದ್ಯೋಗ ಸೌಲಭ್ಯಗಳು ಸಿಗುವಂತಹ ವಾತಾವರಣ ನಿರ್ಮಿಸಿ. ಆರ್ಸೆಟಿ ತರಬೇತಿ ಕೇಂದ್ರದಲ್ಲಿ ವರ್ಷದ 365 ದಿನವೂ ತರಬೇತಿ ನೀಡಬೇಕು ಎಂಬ ನಿಯಮವಿದೆ ಅದರಂತೆ ವರ್ಷವಿಡೀ ತರಬೇತಿ ಕಾರ್ಯ ನಿರ್ವಹಿಸಿ ಎಂದರು.