ಮುನಿರಾಬಾದ್ ಸಮೀಪದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಆವರಣದಲ್ಲಿ ಶೌಚಗೃಹ ನಿರ್ಮಾಣಕ್ಕೆ ಸಂಸದ ರಾಜಶೇಖರ್ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು. ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಎಚ್.ಪ್ರಕಾಶ್ ರಾವ್, ತಾಪಂ ಮಾಜಿ ಸದಸ್ಯ ಪಾಲಾಕ್ಷಪ್ಪ ಗುಂಗಾಡಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಭಕ್ತರಿಗೆ
ಭಕ್ತರಿಗೆ ಸೌಕರ್ಯ ಒದಗಿಸುವುದು ನಮ್ಮ ಆದ್ಯತೆ
ಮುನಿರಾಬಾದ್: ಪುಣ್ಯಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಸೌಕರ್ಯ ಒದಗಿಸುವುದು ನಮ್ಮ ಆದ್ಯತೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಸಮೀಪದ ಹುಲಿಗಿ ಗ್ರಾಮದಲ್ಲಿ ಭಾನುವಾರ ಶೌಚಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹುಣ್ಣಿಮೆ ಮತ್ತು ಜಾತ್ರೆ ಸಂದರ್ಭದಲ್ಲಿ ಹುಲಿಗೆಮ್ಮ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಖಾಸಗಿ ಹಾಗೂ ದೇವಸ್ಥಾನ ಸಮಿತಿ ಸಹಭಾಗಿತ್ವದಲ್ಲಿ ಶೌಚಗೃಹ ನಿರ್ಮಿಸಲಾಗುತ್ತಿದೆ ಎಂದರು.
ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಎಚ್.ಪ್ರಕಾಶ್ ರಾವ್, ತಾಪಂ ಮಾಜಿ ಸದಸ್ಯ ಪಾಲಾಕ್ಷಪ್ಪ ಗುಂಗಾಡಿ, ಪ್ರಮುಖರಾದ ಈರಣ್ಣ ಈಳಿಗೇರ, ವಿ.ವೆಂಕಟೇಶ, ವಿಜಯಕುಮಾರ್ ಶೆಟ್ಟಿ, ರಾಜು ಜವಳಿ, ಅಜಿತ್ ಕುಮಾರ್, ಪ್ರಕಾಶ್ ಹುರಳಿ ಇತರರಿದ್ದರು.