ಹುಲಿಗಿಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸ್ಥಳಕ್ಕೆ ಸಂಸದ ರಾಜಶೇಖರ ಹಿಟ್ನಾಳ ಮಂಗಳವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಪ್ರಮುಖರಾದ ಪಾಲಕ್ಷಪ್ಪ ಗುಂಗಾಡಿ, ಈರಣ್ಣ ಈ, ಹನುಮಂತಪ್ಪ ಗಿಡ್ಡಾಲಿ, ಧರ್ಮರಾವ್ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿದ್ದರು.
ಅಧಿಕಾರಿಗಳು-ಗುತ್ತಿಗೆದಾರರಿಗೆ ಸಂಸದ ರಾಜಶೇಖರ ಹಿಟ್ನಾಳ ಸೂಚನೆ
ಹುಲಿಗಿ ರೈಲ್ವೆ ಮೇಲ್ಸೇತುವೆ ಕೆಲಸ ಪರಿಶೀಲನೆ
ಮುನಿರಾಬಾದ್: ಸಮೀಪದ ಹುಲಿಗಿಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸ್ಥಳಕ್ಕೆ ಸಂಸದ ರಾಜಶೇಖರ ಹಿಟ್ನಾಳ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು, ಕಾಮಗಾರಿ ಗುಣಮಟ್ಟ ಮತ್ತು ವಿಳಂಬವಾಗುತ್ತಿರುವ ಅಂಶಗಳ ಕುರಿತು ಚರ್ಚಿಸಿದರು.
ರೈಲ್ವೆ ಮೇಲ್ಸೇತುವೆ ಈ ಭಾಗದ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಂತರ ಮುನಿರಾಬಾದ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದರು, ಅಲ್ಲಿನ ಪ್ರಯಾಣಿಕರ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ನಿಲ್ದಾಣದಲ್ಲಿ ಕುಡಿವ ನೀರು, ಆಸನಗಳ ವ್ಯವಸ್ಥೆ, ಸ್ವಚ್ಛತೆ ಮತ್ತು ಪ್ರಯಾಣಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಪ್ರಯಾಣಿಕರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಮುಖರಾದ ಪಾಲಕ್ಷಪ್ಪ ಗುಂಗಾಡಿ, ಈರಣ್ಣ ಈ, ಹನುಮಂತಪ್ಪ ಗಿಡ್ಡಾಲಿ, ಧರ್ಮರಾವ್, ವೆಂಕಟೇಶ ವಡ್ಡರ್, ಶಿವು ದಳಪತಿ, ರಾಜು ಜವಳಿ, ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರ‌್ದಿರು.