ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಸಜ್ಜಾಗಿ

ಕುಷ್ಟಗಿ ಬಿಜೆಪಿ ಕಚೇರಿಯಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಪೋಸ್ಟರ್‌ಗಳನ್ನು ಶಾಸಕ ದೊಡ್ಡನಗೌಡ ಪಾಟೀಲ್ ಬುಧವಾರ ಬಿಡುಗಡೆಗೊಳಿಸಿದರು. ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಮಹಾಂತೇಶ ಬದಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹೇಶ್, ಯುವ ಮೋರ್ಚಾದ ಅಧ್ಯಕ್ಷ ಉಮೇಶ್ ಯಾದವ್ ಇದ್ದರು.
ಕುಷ್ಟಗಿ ಬಿಜೆಪಿ ಕಚೇರಿಯಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಪೋಸ್ಟರ್‌ಗಳನ್ನು ಶಾಸಕ ದೊಡ್ಡನಗೌಡ ಪಾಟೀಲ್ ಬುಧವಾರ ಬಿಡುಗಡೆಗೊಳಿಸಿದರು. ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಮಹಾಂತೇಶ ಬದಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹೇಶ್, ಯುವ ಮೋರ್ಚಾದ ಅಧ್ಯಕ್ಷ ಉಮೇಶ್ ಯಾದವ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪೋಸ್ಟರ್ ಬಿಡುಗಡೆಗೊಳಿಸಿದ ಶಾಸಕ ದೊಡ್ಡನಗೌಡ ಪಾಟೀಲ್
  • ಅಭಿಮಾನೋತ್ಸವಕ್ಕೆ ಸಾಕ್ಷಿಯಾಗಲಿರುವ ಗಣ್ಯರು, ಮಠಾಧೀಶರು
ಕುಷ್ಟಗಿ: ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮತಕ್ಷೇತ್ರದಲ್ಲಿ ಕಾರ್ಯಕರ್ತರು ಸಿದ್ಧರಾಗಬೇಕೆಂದು ವಿಪ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಅಭಿಮಾನೋತ್ಸವ ಪೋಸ್ಟರ್ ಬಿಡುಗಡೆಗೊಳಿಸಿ ಬುಧವಾರ ಮಾತನಾಡಿದರು. ಚಿತ್ರದುರ್ಗದ ಮಾದರ ಚನ್ನಯ್ಯ, ಭೋವಿ ಗುರುಪೀಠದ ಮಠಾಧೀಶರು ಸೇರಿದಂತೆ ಅನೇಕ ಗಣ್ಯರು ಅಭಿಮಾನೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ. ಅನ್ನದಾತರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಯಡಿಯೂರಪ್ಪ ಅವರ ಅಭಿಮಾನೋತ್ಸವ ಹಾಗೂ ಸ್ವಾಭಿಮಾನೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ಭವ್ಯ ಮೆರವಣಿಗೆ ವೇದಿಕೆ ನಿರ್ಮಾಣವಾಗಿದೆ. 
ಮತ ಕ್ಷೇತ್ರದಿಂದ ಐದಾರು ಸಾವಿರ ಕಾರ್ಯಕರ್ತರು ತೆರಳುವ ನಿರೀಕ್ಷೆ ಇದೆ. ಬಾಗಲಕೋಟೆ ಮತ್ತು ದಾವಣಗೆರೆ ಮತಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ ಹೊಂದಿತ್ತು. ಆದರೆ ಆಡಳಿತ ಪಕ್ಷಕ್ಕೆ ಮತದಾರರು ಒಲವು ತೋರಿದ್ದಾರೆ.  ದಾವಣಗೆರೆಯಲ್ಲಿ ಅಲ್ಪ ಮತಗಳಿಂದ ಪಕ್ಷದ ಅಭ್ಯರ್ಥಿಗೆ ಸೋಲಾಗಿದೆ ಎಂದರು.
ಕ್ಷೇತ್ರದಲ್ಲಿ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡುತ್ತಿದ್ದು, ಸ್ವಯಂ ಪ್ರೇರಿತವಾಗಿ ಯಡಿಯೂರಪ್ಪ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮುಖಂಡರಾದ ಅಶೋಕ ಬಳೂಟಗಿ, ಶಶಿಧರ್ ಕವಲಿ, ಮಲ್ಲಣ್ಣ ಪಲ್ಲೇದ್, ಲಾಡಸಾಬ್ ಕೊಳ್ಳಿ ಇತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net