10 ಕೋಟಿ ನಾರಿಯರ ಪ್ರಯಾಣ

ಕೊಪ್ಪಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಒ ವರ್ಣಿತ್ ನೇಗಿ ಇದ್ದರು.
ಕೊಪ್ಪಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಒ ವರ್ಣಿತ್ ನೇಗಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೆಡ್ಡಿ ಶ್ರೀನಿವಾಸ ಹೇಳಿಕೆ
  • ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ
ಕೊಪ್ಪಳ: ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 10 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು 375 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.
ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಸಾಮಾಜಿಕ ಕಾರ್ಯಕ್ರಮ. ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಪ್ರಗತಿ ಸಾಧಿಸಿದೆ. ಪಂಚ ಗ್ಯಾರಂಟಿ ಕುರಿತು ಕಾಲೇಜು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ನ್ಯಾಯ ಬೆಲೆ ಅಂಗಡಿಗೆ ಹೋಗಿ ಅಕ್ಕಿ ತರಲು ಸಾದ್ಯವಿಲ್ಲದ ಹಿರಿಯ ನಾಗರಿಕರ ಮನೆಗೆ ಅನ್ನಭಾಗ್ಯ ಅಕ್ಕಿ ತಲುಪಿಸಿ‌‌. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸರಿಪಡಿಸಿ. ವಿವಿಧ ಕಾರಣಗಳಿಂದ ಗೃಹ ಲಕ್ಷ್ಮೀ ಹಣ ಜಮಾ ಆಗದೆ ಇರುವವರನ್ನು ಗುರುತಿಸಿ ಸಮಸ್ಯೆ ಪರಿಹರಿಸಿ. ಆದಷ್ಟು ಬೇಗ ಅರ್ಹ ಫಲಾನುಭವಿಗೆ ಹಣ ತಲುಪುವಂತೆ ಕ್ರಮ ವಹಿಸಿ. ಸರ್ಕಾರದ ಎಲ್ಲ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ದುರುಪಯೋಗ ಆಗದಂತೆ ನಿಗವಹಿಸಿ. ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಹಣ 63.90 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಫಲಾನುಭವಿಗಳಿಂದ ಮಾಹಿತಿ ಪಡೆಯಿರಿ. ಯೋಜನೆಗಳಿಂದ ಬರುವ ಮೊತ್ತದ ಸದ್ಬಳಕೆ ಬಗ್ಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ 3,19,665 ಫಲಾನುಭವಿಗಳಿಗೆ ಆಗಸ್ಟ್ ಅಂತ್ಯಕ್ಕೆ 63.93 ಕೋಟಿ ರೂ., ಗೃಹಜ್ಯೋತಿಯಡಿ ನವೆಂಬರ್ ಅಂತ್ಯಕ್ಕೆ 2,96,448 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, 326.02 ಕೋಟಿ ರೂ. ಖರ್ಚು ಮಾಡಲಾಗಿದೆ. ಯುವನಿಧಿ ಯೋಜನೆಯಡಿ 11,945 ಫಲಾನುಭವಿಗಳು ನೋಂದಣಿಯಾಗಿದ್ದು, ಜುಲೈ ಅಂತ್ಯದವರೆಗೆ‌ 19.25 ಕೋಟಿ ರೂ. ಪಾವತಿಸಲಾಗಿದೆ‌. ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ 34 ಅಭ್ಯರ್ಥಿಗಳಿಗೆ 30 ದಿನಗಳ ಡಾಟಾ ಎಂಟ್ರಿ ಆಪರೇಟರ್ ತರಬೇತಿ ನೀಡಿದ್ದಾಗಿ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net