ಅರ್ಹ ರೈತರಿಗೆ ಶೀಘ್ರವೇ ಹಕ್ಕು ಪತ್ರ

ಗಂಗಾವತಿ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಹಮ್ಮಿಕೊಂಡ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಸಭೆಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ಗಂಗಾವತಿ ತಹಸೀಲ್ದಾರ್ ವಿಶ್ವನಾಥ ಮುರಡಿ, ಕೊಪ್ಪಳ ತಹಸೀಲ್ದಾರ್ ಬಸವರಾಜ ಚನ್ನಳ್ಳಿ, ಎಡಿಎಲ್‌ಆರ್ ರಾಜಶೇಖರ್ ಇತರರಿದ್ದರು.
ಗಂಗಾವತಿ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಹಮ್ಮಿಕೊಂಡ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಸಭೆಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ಗಂಗಾವತಿ ತಹಸೀಲ್ದಾರ್ ವಿಶ್ವನಾಥ ಮುರಡಿ, ಕೊಪ್ಪಳ ತಹಸೀಲ್ದಾರ್ ಬಸವರಾಜ ಚನ್ನಳ್ಳಿ, ಎಡಿಎಲ್‌ಆರ್ ರಾಜಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆ
  • ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿ ಸಭೆ
ಗಂಗಾವತಿ: ಸರ್ಕಾರಿ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಅಧಿಕಾರಿಗಳು ನೆರವಾಗಬೇಕಿದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.
ನಗರದ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಸಭೆಯಲ್ಲಿ ಮಾತನಾಡಿದರು.
ಸಮಿತಿ ಬಂದಿರುವ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕಿದ್ದು, ಹಲವು ದಶಕಗಳಿಂದ ಭೂಮಿ ನಂಬಿ ಬದುಕುತ್ತಿರುವ ಅರ್ಹ ರೈತರಿಗೆ ಶೀಘ್ರವೇ ಹಕ್ಕು ಪತ್ರ ವಿತರಿಸಲಾಗುವುದು. ಗಂಗಾವತಿ ಹೋಬಳಿ ಮತ್ತು ವೆಂಕಟಗಿರಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಅರ್ಜಿಗಳನ್ನು ವಿಲೇವಾರಿಗೊಳಿಸಬೇಕು. ಸ್ಥಳ ಪರಿಶೀಲಿಸಿದ ವರದಿಯನ್ನು ನೀಡಿದರೆ ಮುಂದಿನ ಸಭೆಯಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಅರ್ಜಿಗಳ ವಿಸ್ತೃತ ಪರಿಶೀಲನೆ ನಡೆಸಲಾಯಿತು. ನಂತರ ಆಯೋಜಿಸಿದ್ದ ಕುಡಿವ ನೀರಿನ ವಿಶೇಷ ಸಭೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿನ ಗ್ರಾಮಗಳ ಕುಡಿವ ನೀರಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿ ಗ್ರಾಮದಲ್ಲೂ ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆವಹಿಸಬೇಕಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಪಂ ಮತ್ತು ಕಂದಾಯ ಸಿಬ್ಬಂದಿ ನಿಗಾವಹಿಸುವಂತೆ ಸೂಚನೆ ನೀಡಿದರು. ಗ್ರಾಮಗಳಲ್ಲಿನ ಕುಡಿವ ನೀರಿನ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net