133ನೇ ದಿನದ ಹೋರಾಟ ಅಂಗವಾಗಿ ಕಿಡದಾಳ, ಬಸಾಪುರ, ಗಿಣಿಗೇರಾ, ಕನಕಾಪುರ, ಕಾಸನಕಂಡಿ, ಹಿರೇಬಗನಾಳ, ಚಿಕ್ಕಬಗನಾಳ, ಲಾಚನಕೇರಿ, ಕುಣಿಕೇರಿ, ಕುಣಿಕೇರಿ ತಾಂಡಾ, ಹಾಲವರ್ತಿ ಗ್ರಾಮಗಳಲ್ಲಿ ಅರಿವು ಮೂಡಿಸಲಾಯಿತು. ಮಾಲಿನ್ಯಕಾರಕ ಕಾರ್ಖಾನೆಗಳನ್ನು ಸ್ಥಳಾಂತರ ಮಾಡಿ, ಬಲ್ಡೋಟ ಅತಿಕ್ರಮಣದಿಂದ ಬಸಾಪುರ ಕೆರೆ ಮುಕ್ತಗೊಳಿಸಿ, ತುಂಗಭದ್ರಾ ವಿಷಗೊಳಿಸಿದ ಕೈಗಾರಿಕೆಗಳನ್ನು ಬಂದ್ ಮಾಡಿ ಎಂದು ಆಗ್ರಹಿಸಿದರು. ಕಾಸನಕಂಡಿಯಲ್ಲಿ ಬಹಿರಂಗ ಸಭೆ ನಡೆಸಲಾಯಿತು.