ಹುಲಿಕೆರೆ ಒತ್ತುವರಿ ತೆರವುಗೊಳಿಸಿ

ಹುಲಿಕೆರೆ ಒತ್ತುವರಿ ತೆರವಿಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಸೋಮವಾರ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ ಹಾಗೂ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಗೆ ಮನವಿ ಸಲ್ಲಿಸಿದರು. ಶಾಸಕ ದೊಡ್ಡನಗೌಡ ಪಾಟೀಲ್​, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್​, ಪ್ರಮುಖರಾದ ಮಹಾಂತೇಶ ಮೈನಳ್ಳಿ, ವಿರೇಶ ಸಜ್ಜನ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಶಿವರಾಜ ತಂಗಡಗಿಗೆ ಮನವಿ
ಕೊಪ್ಪಳ : ಹುಲಿಕೆರೆ ಒತ್ತುವರಿಯಾಗುತ್ತಿದ್ದು, ಇತ್ತೇಚೆಗೆ ಕೆರೆಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ರಸ್ತೆ ತೆರವು ಮಾಡುವಂತೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಸೋಮವಾರ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ ಹಾಗೂ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಗೆ ಮನವಿ ಸಲ್ಲಿಸಿದರು.
ಕೆರೆ 100 ಎಕರೆ ವಿಸ್ತೀರ್ಣ ಹೊಂದಿದೆ. ಐತಿಹಾಸಿ, ಧಾರ್ಮಿಕ ತಾಣ. ಅಕ್ರಮವಾಗಿ ಒತ್ತುವರಿ ಮುಂದುವರೆದಿದೆ. ಈಗಾಗಲೇ 30 ಅಡಿ ಅಗಲ, 800 ಅಡಿ ಉದ್ದದ ರಸ್ತೆ ನಿರ್ಮಿಸಿದ್ದಾರೆ. ಕೆರೆ ರಕ್ಷಣೆ ನಮ್ಮೆಲ್ಲರ ಹೊಣೆ. ಕೆರೆಯ ಮೂಲ ಪ್ರದೇಶ ಹಾಗೂ ಬಫರ್​ ಜೋನ್​ ಕೆಲ ಪ್ರಭಾವಿಗಳು ಅತಿಕ್ರಮಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸ್ವರೂಪ ಬದಲಿಸಿ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಕೆರೆ ಭರ್ತಿಯಾದಾಗ ಹೆಚ್ಚುವರಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗುವ ಭೀತಿ ಎದುರಾಗಿದೆ. ಅಂತರ್ಜಲ ಮಟ್ಟವೂ ಕುಸಿಯಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತಕ್ಷಣ ಅಕ್ರಮ ರಸ್ತೆ ತೆರವು ಮಾಡಿ. ಸರ್ವೇ ಮಾಡಿಸಿ ಹದ್ದುಬಸ್ತು ಮಾಡಿಸಬೇಕು. ಅಕ್ರಮವಾಗಿ ರಸ್ತೆ ನಿರ್ಮಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ತನಿಖೆ ಮುಗಿವವರೆಗೆ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಬಾರದು ಎಂದು ಒತ್ತಾಯಿಸಿದರು. ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್​, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್​, ಪ್ರಮುಖರಾದ ಮಹಾಂತೇಶ ಮೈನಳ್ಳಿ, ವಿರೇಶ ಸಜ್ಜನ, ಸುನಿಲ್​ ಹೆಸರೂರು, ಗಣೇಶ ಹೊರತಟ್ನಾಳ, ನೀಲಕಂಠಯ್ಯ ಹಿರೇಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net