ಮುನಿರಾಬಾದ್: ಸಮೀಪದ ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಶನಿವಾರ ಹುಂಡಿ ಹಣ ಎಣಿಕೆ ಮಾಡಲಾಯಿತು. 25 ಹುಂಡಿಗಳಲ್ಲಿ ಒಟ್ಟು 1.03 ಕೋಟಿ ರೂ. ನಗದು, 78 ಗ್ರಾಂ ಕಚ್ಚಾ ಬಂಗಾರ ಹಾಗೂ 3.30 ಕೆಜಿ ಕಚ್ಚಾ ಬೆಳ್ಳಿ ಸಂಗ್ರಹವಾಗಿದೆ. ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ಪಾಲಕ್ಷಪ್ಪ ಗುಂಗಾಡಿ, ಈರಣ್ಣ., ದೇವಸ್ಥಾನ ಕಾರ್ಯದರ್ಶಿ ಎಂ.ಎಚ್.ಪ್ರಕಾಶ ರಾವ್ ಇತರರಿದ್ದರು.