ವಾಹನಗಳ ಸುಸ್ಥಿತಿ ಕಾಪಾಡಿ, ಆರ್ ಟಿಒ ಪ್ರಭುಸ್ವಾಮಿ ಮನವಿ

ಕೊಪ್ಪಳದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿ‌ ಪತ್ರ ವಿತರಿಸಲಾಯಿತು. ಆರ್ ಟಿಒ ಪ್ರಭುಸ್ವಾಮಿ ಹಿರೇಮಠ, ಪರಿಸರ ಅಧಿಕಾರಿ ಅಮರ್, ಡಿಡಿಪಿಐ ಕಚೇರಿ ಅಧೀಕ್ಷಕ ಉಮೇಶ ಇದ್ದರು.
ಕೊಪ್ಪಳದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿ‌ ಪತ್ರ ವಿತರಿಸಲಾಯಿತು. ಆರ್ ಟಿಒ ಪ್ರಭುಸ್ವಾಮಿ ಹಿರೇಮಠ, ಪರಿಸರ ಅಧಿಕಾರಿ ಅಮರ್, ಡಿಡಿಪಿಐ ಕಚೇರಿ ಅಧೀಕ್ಷಕ ಉಮೇಶ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆರ್ ಟಿಒ ಪ್ರಭುಸ್ವಾಮಿ ಮನವಿ
  • ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ
ಕೊಪ್ಪಳ: ಸಾರ್ವಜನಿಕರು ನಿಮ್ಮ ವಾಹನಗಳಿಗೆ ಕಲಬೆರಿಕೆಯಿಲ್ಲದ ಇಂಧನ ಹಾಕಿಸಿ. ಅವುಗಳ ಸುಸ್ಥಿತಿ ಕಾಪಾಡಿಕೊಂಡು ವಾಯು ಮಾಲಿನ್ಯವ ತಡೆಕಟ್ಟಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಹೇಳಿದರು.
ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
ವಾಹನಗಳು ಹೊರಸೂಸುವ ಹೊಗೆಯಿಂದ ಗಾಳಿಯು ವಿಷವಾಗುತ್ತದೆ. ಕಾರ್ಬನ್ ಮಾನಾಕ್ಸೈಡ್, ಕಾರ್ಬನ್ ಡೈ ಆಕ್ಸೈಡ್, ಹೈಡ್ರೋಕಾರ್ಬನ್, ಆಕ್ಸೈಡ್ ಆಫ್ ನೈಟ್ರೋಜನ್, ಸಲ್ಫರ್ ಡೈ ಆಕ್ಸೈಡ್ ಮತ್ತು ಸಸ್ಪೆಂಡೆಡ್ ಪಾರ್ಟಿಕುಲೇಟ್ ಮ್ಯಾರ್‌ಗಳಿಂದ ಮಾನವನ ಆರೋಗ್ಯದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮವಾಗುತ್ತದೆ. ಹೆಚ್ಚು ಹೊಗೆ ಬಿಡುವ ವಾಹನಗಳ ಬಳಕೆ ಮಾಡಬಾರದು. ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಆದ್ಯತೆ ನೀಡಿ. 6 ತಿಂಗಳಿಗೊಮ್ಮೆ ವಾಯು ಮಾಲಿನ್ಯ ತಪಾಸಣೆ ಮಾಡಿಸಿ. ಏರ್ ಫಿಲ್ಟರ್ ಮತ್ತು ಸ್ಪಾರ್ಕ್ ಪ್ಲಗ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ನಿಯಂತ್ರಣ ಕುರಿತು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಹಮ್ಮಿಕೊಂಡು ಪರಿಸರ ಸಂರಕ್ಷಣೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಅಮರ್ ಮಾತನಾಡಿ, ವಿವಿಧ ಬಗೆಯ ಮಾಲಿನ್ಯಗಳಿಂದ ಆಗುವ ದುಷ್ಪರಿಣಾಮಗಳು ಹಾಗೂ ವಾಯುಮಾಲಿನ್ಯ ತಡೆಗಟ್ಟುವ ವಿಧಾನಗಳ ಮಾಹಿತಿ ನೀಡಿದರು.
ಡಿಡಿಪಿಐ ಕಚೇರಿ ಅಧೀಕ್ಷಕ ಮಾತನಾಡಿದರು. ವಾಯು ಮಾಲಿನ್ಯ ನಿಯಂತ್ರಣ ಕುರಿತು ಏರ್ಪಡಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ನೀಡಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಜಿ.ಎಂ.ಸುರೇಶ್, ಮೋಟಾರು ವಾಹನ ನಿರೀಕ್ಷಕ ವಿಜೇಂದ್ರ ಡವಳಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net