ಎಸ್​ಡಿಪಿಐ ಸಂಟನೆ ಬಲವರ್ಧನೆಗೆ ಆಧ್ಯತೆ ನೀಡಿ

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಎಸ್​ಡಿಪಿಐ ತಾಲೂಕು ಸಮಿತಿ ಸಭೆಯಲ್ಲಿ ಎಸ್​ಡಿಪಿಐ ಪಕ್ಷದ ಜಿಲ್ಲಾ ಉಸ್ತುವಾರಿ ಅಬ್ರಾರ್​ ಅಹ್ಮದ್​ ಮಾತನಾಡಿದರು. ಎಸ್​ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್​ ಮಾಳೆಕೊಪ್ಪ, ಪದಾಧಿಕಾರಿಗಳಾದ ರಜೀಉರ್​ ರೆಹ್ಮಾನ್​, ಮುಹಮ್ಮದ್​ ಸಾದಿಕ್​,  ಸಲೀಂ ಖಾದ್ರಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅಬ್ರಾರ್​ ಅಹ್ಮದ್​ ಸೂಚನೆ

ಕೊಪ್ಪಳ : ನಗರದ ಎಲ್ಲ ವಾರ್ಡ್​ಗಳಲ್ಲಿ ಸೋಶಿಯಲ್​ ಡೆಮಾಕ್ರಟಿಕ್​ ಪಾರ್ಟಿ ಆಫ್​ ಇಂಡಿಯಾ ಸಂಘಟನೆಯನ್ನು ಇನ್ನಷ್ಟು ಬಲಿಷ್ಟಗೊಳಿಸುವುದರೊಂದಿಗೆ ಮುಂಬರುವ ನಗರಸಭೆ ಹಾಗೂ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕು ಎಂದು ಎಸ್​ಡಿಪಿಐ ಪಕ್ಷದ ಜಿಲ್ಲಾ ಉಸ್ತುವಾರಿ ಅಬ್ರಾರ್​ ಅಹ್ಮದ್​ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಎಸ್​ಡಿಪಿಐ ತಾಲೂಕು ಸಮಿತಿ ಸಭೆಯಲ್ಲಿ ಮಾತನಾಡಿದರು.
ಸ್ಥಳಿಯ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಪ್ರತಿ ಬೂತ್​ನಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ವಾರ್ಡ್​ವಾರು ಸಂಘಟನಾ ಚಟುವಟಿಕೆಗಳನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ಚರ್ಚಿಸಿ. ನಗರಸಭೆ ಚುನಾವಣೆ ಮತ್ತು 2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ತಳಮಟ್ಟದಿಂದಲೇ ಬಲಪಡಿಸುವ ಅಗತ್ಯವಿದೆ. ಇದಕ್ಕಾಗಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಎಸ್​ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್​ ಮಾಳೆಕೊಪ್ಪ, ಜಿಲ್ಲಾ ಕಾರ್ಯದರ್ಶಿ ರಜೀಉರ್​ ರೆಹ್ಮಾನ್​, ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಮುಹಮ್ಮದ್​ ಸಾದಿಕ್​, ಎಸ್​ಡಿಪಿಐ ತಾಲೂಕು ಅಧ್ಯಕ್ಷ ಸಲೀಂ ಖಾದ್ರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net