ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ

ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ವತಿಯಿಂದ ಯಲಬುರ್ಗಾದಲ್ಲಿ ಶಿರಸ್ತೇದಾರ್ ಮಲ್ಲಿಕಾರ್ಜುನ ಶಾಸ್ತ್ರಿಮಠಗೆ ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಬಿ.ಎಸ್.ಅಧಿಕಾರಿ, ಬಸವರಾಜ ಗುಳಗುಳಿ, ಶರಣಬಸಪ್ಪ ದಾನಕೈ, ಮಲ್ಲಿಕಾರ್ಜುನ ಉಳ್ಳಾಗಡ್ಡಿ, ಜಗದೀಶ ಸಂಕನಗೌಡ್ರ, ಸುರೇಶಗೌಡ ಶಿವನಗೌಡ್ರ, ರುದ್ರಗೌಡ ಸೊಲಬಗೌಡ್ರ, ಸಿದ್ದಪ್ಪ ಅಕ್ಕಿಗೋಣಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಿರಸ್ತೇದಾರ್‌ಗೆ ಕೃಷಿಕರ ಮನವಿ
  • ಕಡಿಮೆ ಬೆಲೆಗೆ ಬೆಳೆಗಳ ಮಾರಾಟ ನಿಲ್ಲಲಿ
ಯಲಬುರ್ಗಾ: ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ವತಿಯಿಂದ ಪಟ್ಟಣದ ತಹಸಿಲ್ ಕಚೇರಿಯ ಶಿರಸ್ತೇದಾರ್ ಮಲ್ಲಿಕಾರ್ಜುನ ಶಾಸ್ತ್ರಿಮಠಗೆ ಶನಿವಾರ ಮನವಿ ಸಲ್ಲಿಸಲಾಯಿತು.
ತಾಲೂಕಾಧ್ಯಕ್ಷ ದಾನನಗೌಡ ತೊಂಡಿಹಾಳ ಮಾತನಾಡಿ, ಪ್ರಕೃತಿ ವಿಕೋಪದಿಂದ ಪ್ರಸಕ್ತ ಸಾಲಿನಲ್ಲಿ ಬೆಳೆಗಳ ಇಳುವರಿ ಕುಂಠಿತಗೊಂಡಿವೆ. ಮಾರುಕಟ್ಟೆಯಲ್ಲಿ ಬೆಲೆ ಸಿಗದೆ ದಲ್ಲಾಳಿಗಳು ರೈತರನ್ನು ವಂಚಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾನಾ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿದರೂ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿವೆ. ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಶೀಘ್ರವೇ ಕೇಂದ್ರ ತೆರೆಯಬೇಕು. ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಸಮರ್ಪಕವಾಗಿ ವಿತರಿಸುವಂತೆ ಆಗ್ರಹಿಸಿದರು.
ರೈತ ಮುಖಂಡ ಬಸಲಿಂಗಪ್ಪ ಭೂತೆ ಮಾತನಾಡಿ, ಪಟ್ಟಣದ ಕೆಂಪು ಕೆರೆ ತುಂಬಿರುವುದರಿಂದ ಸುತ್ತಲಿನ ರೈತರ ನೂರಾರು ಎಕರೆ ಬೆಳೆಗೆ ನೀರು ನುಗ್ಗಿ ಹಾನಿಯಾಗಿದೆ. ನೀರು ಹೋಗಲು ಕೆರೆಯ ಸುತ್ತಲು ಬಸಿಗಾಲುವೆ ತೆಗೆದು ರೈತರ ಬೆಳೆ ಉಳಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ಜಮೀನಿಗೆ ತೆರಳುವ ರಸ್ತೆ ಹದಗೆಟ್ಟಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net