ನ್ಯಾಯಬೆಲೆ ಅಂಗಡಿಯಲ್ಲಿ ಹೆಚ್ಚುತ್ತಿರುವ ಸರ್ವರ್ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಸದಸ್ಯರು ಗಂಗಾವತಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ಗೌರವಾಧ್ಯಕ್ಷ ಗೌರವಾಧ್ಯಕ್ಷ ಟಿ.ಎಂ.ಚನ್ನಬಸವಶಾಸಿ, ತಾಲೂಕಾಧ್ಯಕ್ಷ ಕೆ.ಮಂಜುನಾಥ, ಪದಾಧಿಕಾರಿಗಳಾದ ಎಂ.ಪಿ.ಪಂಪನಗೌಡ, ಎಂ.ಡಿ.ಯಾಜ್ ಇತರರಿದ್ದರು.
ಗಂಗಾವತಿ: ನ್ಯಾಯಬೆಲೆ ಅಂಗಡಿಯಲ್ಲಿ ಹೆಚ್ಚುತ್ತಿರುವ ಸರ್ವರ್ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಸದಸ್ಯರು ನಗರದ ತಾಲೂಕಾಡಳಿತ ಸೌಧದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.
ಸಂಘದ ತಾಲೂಕಾಧ್ಯಕ್ಷ ಕೆ.ಮಂಜುನಾಥ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ವಿತರಿಸುವ ವ್ಯವಸ್ಥೆ ಆನ್‌ಲೈನ್‌ನಲ್ಲಿದ್ದು, ಸರ್ವರ್ ಸಮಸ್ಯೆಯಿಂದ ಸಕಾಲಕ್ಕೆ ಲಾನುಭವಿಗಳಿಗೆ ವಿತರಿಸಲಾಗುತ್ತಿಲ್ಲ. ಕಳೆದ 15 ದಿನಗಳಿಂದ ಸರ್ವರ್ ಸಮಸ್ಯೆ ಮಿತಿ ಮೀರಿದ್ದು, ಡಿಸೆಂಬರ್ ಅಂತ್ಯದೊಳಗೆ ಪಡಿತರ ವಿತರಿಸುವುದು ಅಸಾಧ್ಯವಾಗುತ್ತಿದೆ. ಪಡಿತರಕ್ಕಾಗಿ ಬರುವ ಬಡ ಮತ್ತು ಮಧ್ಯಮ ವರ್ಗದ ಲಾನುಭವಿಗಳಿಗೆ ದಿನಗಟ್ಟಲೇ ಕೆಲಸ ಬಿಟ್ಟು ನ್ಯಾಯ ಬೆಲೆ ಅಂಗಡಿ ಮುಂದೆ ಕಾಯುವ ಸ್ಥಿತಿ ಬಂದಿದೆ. ಕೂಡಲೇ ಸರ್ವರ್ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿದರು.