ಈ ಬಾರಿ ರಾಜ್ಯ ಸರ್ಕಾರದಿಂದ ಪಡಿತರ ಸರಬರಾಜು ಆಗಿಲ್ಲ. ಕೇಂದ್ರ ಸರ್ಕಾರದಿಂದ ಬಂದ ಅಕ್ಕಿಯನ್ನು ಫಲಾನುಭವಿಗಳಿಗೆ ಹಂಚಲಾಗುತ್ತಿದೆ. ಅಕ್ಕಿ ವಿತರಣೆಗೆ ಸರ್ವರ್ ಸಮಸ್ಯೆ ಅಡ್ಡಿಯಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ನೂಕುನುಗ್ಗಲು ಉಂಟಾಗುತ್ತಿದೆ. ಒಂದು ಪಡಿತರ ಕಾರ್ಡ್‌ಗೆ 10 ರಿಂದ 15 ನಿಮಿಷ ತೆಗೆದುಕೊಳ್ಳುತ್ತಿದೆ. ಈ ಸಮಸ್ಯೆಯಿಂದ ಕೂಲಿ ಕಾರ್ಮಿಕರು, ವಯೋವೃದ್ಧರು, ಅಂಗವಿಲಕರು, ರೈತರಿಗೆ ತೀವ್ರ ತೊಂದರೆಯಾಗಿದ್ದು, ದಿನವಿಡಿ ಸರದಿಯಲ್ಲಿ ನಿಂತು ಪಡಿತರ ಪಡೆಯುತ್ತಿದ್ದಾರೆ. ಈ ಕುರಿತು ಮೇಲಧಿಕಾರಿ ಹಾಗೂ ತಾಂತ್ರಿಕ ಸಿಬ್ಬಂದಿ ಜತೆ ಚರ್ಚಿಸಿದರೂ ಪ್ರಯೋಜನವಾಗಿಲ್ಲ ಎಂದು ನ್ಯಾಯಬೆಲೆ ಅಂಗಡಿಯವರು ತಿಳಿಸಿದರು.