ಡಿವೈಎಸ್ಪಿ ಮುತ್ತಣ್ಣ ಸರವಗೋಳ ಮಾತನಾಡಿ, ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ, ಭಿಾಟನೆ, ಮಾದಕ ವಸ್ತುಗಳ ಸಾಗಣೆಗೆ ಬಳಕೆ, ಅಕ್ರಮ ದತ್ತು ಪಡೆಯುವಿಕೆ, ಮಾರಾಟ ಶಿಾರ್ಹ ಅಪರಾಧ. ಪ್ರತಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರನ್ನು ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳೆಂದು ಗುರುತಿಸಲಾಗಿದೆ. ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಪೊಲೀಸ್ ಅಧಿಕಾರಿ ಬಳಿ ಹಾಜರುಪಡಿಸಬಹುದು. ಕಾನೂನು ಸಂರ್ಷಕ್ಕೆ ಒಳಗಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯಿಂದ ಅಗತ್ಯ ಪುನರ್ವಸತಿ ಕಲ್ಪಿಸಲಾಗುವುದೆಂದರು.