ಶ್ರೀ ಹುಲಿಗೆಮ್ಮ ದೇವಿಗೆ ವಿಶೇಷ ಅಲಂಕಾರ

ಶ್ರೀ ಹುಲಿಗೆಮ್ಮ ದೇವಿ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿರುವುದು. ಕಾರ ಹುಣ್ಣಿಮೆ ನಿಮಿತ್ತ ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರಿ ಹುಲಿಗೆಮ್ಮ ದೇವಿ ದರ್ಶನ ಪಡೆದರು.,33 ಸಾಮೂಹಿಕ ಪವಮಾನ ಹೋಮ ಸಂಪನ್ನ
ಶ್ರೀ ಹುಲಿಗೆಮ್ಮ ದೇವಿ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿರುವುದು. ಕಾರ ಹುಣ್ಣಿಮೆ ನಿಮಿತ್ತ ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರಿ ಹುಲಿಗೆಮ್ಮ ದೇವಿ ದರ್ಶನ ಪಡೆದರು.,33 ಸಾಮೂಹಿಕ ಪವಮಾನ ಹೋಮ ಸಂಪನ್ನ
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕ ಕಾರಹುಣ್ಣಿಮೆ
  • 2 ಲಕ್ಷಕ್ಕೂ ಹೆಚ್ಚಿನ ಭಕ್ತರು ಆಗಮಿಸಿ ದೇವಿಯ ದರ್ಶನ
ಮುನಿರಾಬಾದ್: ಸಮೀಪದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಅಧಿಕ ಕಾರಹುಣ್ಣಿಮೆ ಪ್ರಯುಕ್ತ ಭಾನುವಾರ 2 ಲಕ್ಷಕ್ಕೂ ಹೆಚ್ಚಿನ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಬೆಳಗ್ಗೆ ಶ್ರೀ ದೇವಿಗೆ ವಿಶೇಷ ಅಲಂಕಾರ, ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಗಂಗಾ ಪೂಜೆ, ಜೋಗತಿ ಪೂಜೆ ಮೂಲಕ ಹರಕೆ ಸಲ್ಲಿಸಿದರು.
ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಶ್ರೀ ಹುಲಿಗೆಮ್ಮ ದೇವಿ ಜಾತ್ರೋತ್ಸವ ಹಾಗೂ ಕಾರ ಹುಣ್ಣಿಮೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net