ಕ್ರೀಡೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ

ತಾಲೂಕಿನ ಹೊರತಟ್ನಾಳನಲ್ಲಿ ಕ್ರೀಡಾ ಜ್ಯೋತಿ ತರುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಬಸನಗೌಡ ಮರೆಗೌಡ, ಎಸ್​ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಕುಟುಂಬನಹಳ್ಳಿ, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಇದ್ದರು.
ತಾಲೂಕಿನ ಹೊರತಟ್ನಾಳನಲ್ಲಿ ಕ್ರೀಡಾ ಜ್ಯೋತಿ ತರುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಬಸನಗೌಡ ಮರೆಗೌಡ, ಎಸ್​ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಕುಟುಂಬನಹಳ್ಳಿ, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯ ಶಿಕ್ಷಕ ಬಸನಗೌಡ ಮರೆಗೌಡ
ಕೊಪ್ಪಳ : ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದ ಜತೆಗ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೊರತಟ್ನಾಳ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಸನಗೌಡ ಮರೆಗೌಡ ಹೇಳಿದರು.
ತಾಲೂಕಿನ ಹೊರತಟ್ನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 2026&27ನೇ ಶೈಕ್ಷಣಿಕ ಸಾಲಿನ ಶಾಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ನಾಯಕತ್ವ ಮತ್ತು ತಂಡದ ಮನೋಭಾವ ಬೆಳೆಸುತ್ತದೆ. ಶಾಲಾ ಹಂತದಲ್ಲಿಯೇ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದರೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ವಾಲಿಬಾಲ್​, ಥ್ರೋಬಾಲ್​, ಖೋಖೋ, ಕಬಡ್ಡಿ, ಬ್ಯಾಡ್ಮಿಂಟನ್​ ಹಾಗೂ ಅಥ್ಲೆಟಿಕ್ಸ್​ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಶ್ವೇತಾ ಹರಿಜನ ಹಾಗೂ ಚನ್ನಬಸನಗೌಡ ಅವರು ಕ್ರೀಡಾ ಜ್ಯೋತಿ ತರುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಎಸ್​ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಕುಟುಂಬನಹಳ್ಳಿ, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಹನುಮಸಾಗರ, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net