ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರು, ಶಾಸಕರು, ವಿಪ ಸದಸ್ಯರು ಹಾಗೂ ನಗರ-ಸ್ಥಳಿಯ ಪ್ರಾಧಿಕಾರದ ಅಧ್ಯಕ್ಷರುಗಳು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಿ. ರಂದೀಪ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರಾಕೇಶ್ ಕುಮಾರ್ ಕೆ. ಪಾಲ್ಗೊಳ್ಳುವರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಸುಗ್ಗೇನಹಳ್ಳಿ ರಮೇಶ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡುವರು.