ಈ ಬಗ್ಗೆ ಈಗಾಗಲೇ ಜಿಲ್ಲಾಡಳಿತ, ಪೊಲೀಸ್, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕಾಗಿ ಮುಖ್ಯ ಮಂತ್ರಿ, ಗೃಹ ಸಚಿವರ, ಬೆಂಗಳೂರು ಪೋಲಿಸ ಆಯುಕ್ತರು ಐ.ಜಿ. ಮತ್ತು ಡಿ.ಜಿ, ಬಳ್ಳಾರಿ ವಲಯ ಪೋಲಿಸ ಮಹಾ ನಿರ್ದೇಶಕರ ಕಚೇರಿಗೆ ದೂರು ನೀಡಲಾಗಿದೆ. ತಕ್ಷಣ ಅಕ್ರಮ ಮರಳು ಸಾಗಾಣಿಕೆ ತಡೆದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.