ಅಕ್ರಮವನ್ನು ಪ್ರಶ್ನಿಸಿದರೆ ಮರಳು ಮಾಫಿಯಾದವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ. ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಮರಳು ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಎಂದು ದೂರಿದರು. ಕೂಡಲೇ ಅಕ್ರಮ ಸಾಗಾಣಿಕೆ ತಡೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.