ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಿರಿ

ಕೊಪ್ಪಳ ಜಿಲ್ಲೆಯ ಹನುಮಸಾಗರ ಪಟ್ಟಣದಲ್ಲಿ ಆಯೋಜಿಸಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಶಾಸಕ ದೊಡ್ಡನಗೌಡ ಪಾಟೀಲ ಉದ್ಘಾಟಿಸಿದರು. ಜಗದ್ಗುರು ದಯಾನಂದ ಪುರಿ, ಜಿಪಂ ಮಾಜಿ ಸದಸ್ಯ ಕೆ. ಮಹೇಶ್​, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರ ಕರಡಕಲ್​,  ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಇದ್ದರು.
ಕೊಪ್ಪಳ ಜಿಲ್ಲೆಯ ಹನುಮಸಾಗರ ಪಟ್ಟಣದಲ್ಲಿ ಆಯೋಜಿಸಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಶಾಸಕ ದೊಡ್ಡನಗೌಡ ಪಾಟೀಲ ಉದ್ಘಾಟಿಸಿದರು. ಜಗದ್ಗುರು ದಯಾನಂದ ಪುರಿ, ಜಿಪಂ ಮಾಜಿ ಸದಸ್ಯ ಕೆ. ಮಹೇಶ್​, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರ ಕರಡಕಲ್​, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದೊಡ್ಡನಗೌಡ ಪಾಟೀಲ ಸಲಹೆ
ಕೊಪ್ಪಳ : ಇಂದಿನ ಆಧುನಿಕ ಯುಗದಲ್ಲಿ ಎಲ್ಲಾ ವ್ಯವಸ್ಥೆಗಳು ಆನ್​ಲೈನ್​ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದರು.
ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮುದಾಯದಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇವಾಂಗ ಸಮುದಾಯದ ಸಕಲ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 5 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಸಮಾಜದ ಕಲ್ಯಾಣ ಮಂಟಪ ನಿಮಾರ್ಣಕ್ಕೆ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರ ಕರಡಕಲ್​ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಅಪಾರ ಜ್ಞಾನ ಹಾಗೂ ಸಾಧನೆ ಮಾಡಿದ ಅನೇಕ ಮಂದಿಯನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಮಾಜದ ಪ್ರತಿಯೊಬ್ಬರೂ ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದರು.
ಜಿಪಂ ಮಾಜಿ ಸದಸ್ಯ ಕೆ. ಮಹೇಶ್​ ಮಾತನಾಡಿ, ಇಂದಿನ ದಿನಗಳಲ್ಲಿ ನೇಕಾರರ ಬದುಕು ಸಂಕಷ್ಟದಲ್ಲಿದೆ. ಯುವಕರು ಉತ್ತಮ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜದ ಅಗತ್ಯ ಕಾರ್ಯಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಮಾತನಾಡಿ, ಸಮಾಜ ಸಂಘಟಿತವಾದರೆ ಯಾವುದೇ ಗುರಿಯನ್ನು ಸಾಧಿಸಬಹುದು. ಶಿಕ್ಷಣವೇ ಸಮಾಜದ ಸುಧಾರಣೆಯ ಪ್ರಮುಖ ಸಾಧನವಾಗಿದ್ದು, ಜಿಲ್ಲೆಯಲ್ಲಿ ದೇವಾಂಗ ಸಮುದಾಯಕ್ಕೆ ಪ್ರತ್ಯೇಕ ವಸತಿ ನಿಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
ದೇವಾಂಗ ಸಮಾಜದ ಜಗದ್ಗುರು ದಯಾನಂದ ಪುರಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮುಖಂಡರಾದ ಬಸವರಾಜ ಹಳ್ಳೂರ, ಶಿವಶಂಕರ ಚೆನ್ನಿ, ನಾರಾಯಣಪ್ಪ ಕೊಳ್ಳಿ, ಶಂಕ್ರಪ್ಪ ಸಿನ್ನೂರ, ಶಿವನಗೌಡ ಪಾಟೀಲ, ವಿಶ್ವನಾಥ ಯಾಳಗಿ, ಚಂದ್ರಶೇಖರ ಬೆಟಗೇರಿ, ಧರ್ಮಜ್ಜ ಕುದರಿಮೊತಿ, ಬಸವಂತಪ್ಪ ಸಿಂಹಾಸನ, ಹನುಮಂತಗೌಡ ಗಾಳಿ, ಪ್ರಲ್ಹಾದಗೌಡ ಮೆದಿಕೇರಿ, ರಾಘವೇಂದ್ರ ಕೊಂಡಕುಂದಿ, ಕೆ. ಮಹೇಶ್​, ಮೋಹನ್​ ಹುಲಮನಿ, ಪಂಪಾಪತಿ ಅರಳಿಕಟ್ಟಿ, ವಿರೇಶ ಅರಳಿಕಟ್ಟಿ, ಶ್ರೀನಿವಾಸ ಕಂಟ್ಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net