ನಿರಾಶ್ರಿತ ಹಿರಿಯ ನಾಗರಿಕರಿಗೆ ಪೊಲೀಸ್ ರಕ್ಷೆ

ಗಂಗಾವತಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಆಸರೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಪೌಷ್ಟಿಕ ಆಹಾರ ಕಿಟ್ ನೀಡುವ ಮೂಲಕ ಮಂಗಳವಾರ ಗೌರವಿಸಲಾಯಿತು. ಹೆಚ್ಚುವರಿ ಎಸ್ಪಿ ಹೇಮಂತಕುಮಾರ, ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಇತರರಿದ್ದರು.
ಗಂಗಾವತಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಆಸರೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಪೌಷ್ಟಿಕ ಆಹಾರ ಕಿಟ್ ನೀಡುವ ಮೂಲಕ ಮಂಗಳವಾರ ಗೌರವಿಸಲಾಯಿತು. ಹೆಚ್ಚುವರಿ ಎಸ್ಪಿ ಹೇಮಂತಕುಮಾರ, ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆಸರೆ ಯೋಜನೆಯಡಿ ಪೌಷ್ಟಿಕ ಆಹಾರದ ಕಿಟ್ ವಿತರಣೆ
ಗಂಗಾವತಿ: ವಾರಸುದಾರರಿಲ್ಲದ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದ್ದು, ಸರ್ಕಾರದ ಯೋಜನೆಗಳನ್ನು ಕೊಡಿಸಲಾಗುತ್ತಿದೆ ಎಂದು ಹೆಚ್ಚುವರಿ ಎಸ್ಪಿ ಹೇಮಂತಕುಮಾರ ತಿಳಿಸಿದರು.
ನಗರದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಆಸರೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿರಿಯ ನಾಗರಿಕರ ಸುರಕ್ಷೆ ಮತ್ತು ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಆಸರೆ ಯೋಜನೆ ಜಾರಿಯಲ್ಲಿದ್ದು, ಕುಂದುಕೊರತೆಗಳನ್ನು ವಿಚಾರಿಸಲಾಗುವುದು. ಸಾಮಾಜಿಕ ಭದ್ರತಾ, ಆಶ್ರಯ ಸೇರಿ ಇತರ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು. ನಮಗೆ ಯಾರಿಲ್ಲ ಎಂಬ ಭಾವನೆ ಬಾರದಂತೆ ನೋಡಿಕೊಳ್ಳಲಾಗುತ್ತಿದ್ದು, ವಿಚಾರಣೆಗೆ ಪೊಲೀಸ್ ಪೇದೆ ನಿಯೋಜಿಸಲಾಗಿದೆ ಎಂದರು.
ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಮಾತನಾಡಿ, ತ್ರಿವಳಿ ತಾಲೂಕಿನಲ್ಲಿ 41 ನಿರಾಶ್ರಿತ ಹಿರಿಯ ನಾಗರಿಕರನ್ನು ಗುರುತಿಸಲಾಗಿದ್ದು, ಅವರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸಂಬಂಧಪಟ್ಟ ಇಲಾಖೆ ಮೂಲಕ ಕೊಡಿಸಲಾಗುವುದು. ಹಿರಿಯ ನಾಗರಿಕರು ಯಾವುದೇ ಭಯವಿಲ್ಲದೇ ಜೀವಿಸಬಹುದಾಗಿದ್ದು, ಪೊಲೀಸ್ ಇಲಾಖೆ ಕಣ್ಗಾವಲಾಗಿರುತ್ತೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರ ಕುಂದು-ಕೊರತೆಗಳನ್ನು ಆಲಿಸಿ, ಕಾಲಮಿತಿಯೊಳಗೆ ಇತ್ಯರ್ಥ ಪಡಿಸುವಂತೆ ನಿರ್ವಹಣೆ ಪೊಲೀಸ್ ಪೇದೆಗಳಿಗೆ ಸೂಚಿಸಲಾಯಿತು. ಕಾರಟಗಿ ಪಿಐ ಸುರೇಂದ್ರ ಎಂ. ಬೆಂಕಿ, ಕನಕಗಿರಿ ಪಿಐ ಎ.ನಾರಾಯಣ, ಪಿಎಸೈ ಜಿ.ಟಿ.ನಾಗರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net