ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟ ತಣ್ಣಗಾದ ಬೆನ್ನಲ್ಲೇ ಮೆಕ್ಕೆಜೋಳ ಬೆಳೆಗಾರರ ಹೋರಾಟ ಹೆಚ್ಚಾಗುತ್ತಿದೆ. ಮೆಕ್ಕೆಜೋಳ ಬೆಲೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ರೈತರು ಬೇಸತ್ತು ಹೋಗಿದ್ದಾರೆ. ಜಮೀನುಗಳಲ್ಲಿ ಕೆಲಸ ಬಿಟ್ಟು ಬೆಳೆದ ಪ್ರತಿ ಬೆಳೆಗಳಿಗೂ ಬೆಂಬಲ ಬೆಲೆ ನೀಡುವಂತೆ ಬೀದಿಗಿಳಿದು, ಅಹೋರಾತ್ರಿ ಹೋರಾಟ ಮಾಡುವ ಪರಿಸ್ಥಿತಿ ರೈತರಿಗೆ ಬಂದಿದೆ. ಹಾಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು. ಎರಡು ಲಕ್ಷ ರೂ.ವರೆಗೆ ರೈತರ ಸಾಲ ಮನ್ನಾ ಮಾಡಬೇಕು. ಜಿಲ್ಲೆಗೊಂದು ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.