ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ

ಹನುಮಸಾಗರದ ಕರ್ನಾಟಕ ಪಬ್ಲಿಕ ಸ್ಕೂಲ್ ಬಾಲಕರ ಸಹಿಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಹಾಗೂ ಪಾಲಕರ ಸಭೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ ಮಾತನಾಡಿದರು. ಮುಖ್ಯಶಿಕ್ಷಕ ಬಸಪ್ಪ ಬಂಡಿವಡ್ಡರ, ಸಾಮಾಜಿಕ ಲೆಕ್ಕ ಪರಿಶೋಧನೆಯ ತಾಲೂಕು ಅಧಿಕಾರಿಗಳಾದ ರವಿ ಗೌಡ್ರ, ಆನಂದ ಕುಮಾರ, ಎಸ್ಡಿಎಂಸಿ ಸದಸ್ಯ ನಾಗರಾಜ ಹಕ್ಕಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅಪೌಷ್ಟಿಕತೆ
  • ಸರ್ಕಾರಿ ಯೋಜನೆ
  • ಪ್ರಧಾನಮಂತ್ರಿ ಪೋಷಣ್ ಶಕ್ತಿ

ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ

ಹನುಮಸಾಗರ: ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸಿದ್ದು, ಎಲ್ಲರೂ ಸದ್ಬಳಕೆ ಮಾಡಿಕೊಳ್ಳಿ ಎಂದು ಎಸ್ಡಿಎಂಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಾಲಕರ ಸಹಿಪ್ರಾ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಹಾಗೂ ಪಾಲಕರ ಸಭೆಯಲ್ಲಿ ಮಾತನಾಡಿದರು.
ಮಕ್ಕಳು ಗುಣಮಟ್ಟದ ಶಿಕ್ಷಣದ ಜತೆ ಆರೋಗ್ಯವಂತರಾಗಲಿ ಎಂಬ ಉದ್ದೇಶದಿಂದ ಸರ್ಕಾರ ಬಿಸಿಯೂಟ, ಹಾಲು, ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿದೆ. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ದೂರ ಮಾಡಬಹುದು. ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವುದು ಶಾಲಾಡಳಿತ ಮಂಡಳಿ, ಶಿಕ್ಷಕರು ಹಾಗೂ ಪಾಲಕರ ಜವಾಬ್ದಾರಿ ಎಂದರು.
ಮುಖ್ಯಶಿಕ್ಷಕ ಬಸಪ್ಪ ಬಂಡಿವಡ್ಡರ, ಸಾಮಾಜಿಕ ಲೆಕ್ಕ ಪರಿಶೋಧನೆಯ ತಾಲೂಕು ಅಧಿಕಾರಿಗಳಾದ ರವಿ ಗೌಡ್ರ, ಆನಂದ ಕುಮಾರ, ಎಸ್ಡಿಎಂಸಿ ಸದಸ್ಯ ನಾಗರಾಜ ಹಕ್ಕಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net