ಹನುಮಮಾಲಾ ವಿಸರ್ಜನೆ ಅಚ್ಚುಕಟ್ಟಾಗಿರಲಿ

ಗಂಗಾವತಿ ತಾಲೂಕಿನ ಹನುಮನಹಳ್ಳಿಯ ಹಂಪಿ ಡೆಲ್ಮಾಟ್ ಸಭಾಂಗಣದಲ್ಲಿ ಹನುಮಮಾಲೆ ವಿಸರ್ಜನೆ ಕುರಿತು ಹಮ್ಮಿಕೊಂಡಿದ್ದ  ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಮಂಗಳವಾರ ಮಾತನಾಡಿದರು. ತಹಸೀಲ್ದಾರ್ ಯು.ನಾಗರಾಜ್, ರಾಜವಂಶಸ್ಥೆ ಲಲಿತಾರಾಣಿ ರಾಯಲು,ತಾಪಂ ಇಒ ರಾಮರೆಡ್ಡಿ ಪಾಟೀಲ್ ಇತರರಿದ್ದರು.
ಗಂಗಾವತಿ ತಾಲೂಕಿನ ಹನುಮನಹಳ್ಳಿಯ ಹಂಪಿ ಡೆಲ್ಮಾಟ್ ಸಭಾಂಗಣದಲ್ಲಿ ಹನುಮಮಾಲೆ ವಿಸರ್ಜನೆ ಕುರಿತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಮಂಗಳವಾರ ಮಾತನಾಡಿದರು. ತಹಸೀಲ್ದಾರ್ ಯು.ನಾಗರಾಜ್, ರಾಜವಂಶಸ್ಥೆ ಲಲಿತಾರಾಣಿ ರಾಯಲು,ತಾಪಂ ಇಒ ರಾಮರೆಡ್ಡಿ ಪಾಟೀಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಸೂಚನೆ
  • ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಗಂಗಾವತಿ: ಅಂಜನಾದ್ರಿ ಬೆಟ್ಟದಲ್ಲಿ ಜರುಗಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಯೋಜಿಸಬೇಕಿದ್ದು, ಯಶಸ್ಸಿಗೆ ಇಲಾಖಾಧಿಕಾರಿಗಳು ಶ್ರಮಿಸುವಂತೆ ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಹೇಳಿದರು.
ತಾಲೂಕಿನ ಹನುಮನಹಳ್ಳಿಯ ಹಂಪಿ ಡೆಲ್ಮಾಟ್ ಸಭಾಂಗಣದಲ್ಲಿ ಹನುಮಮಾಲೆ ವಿಸರ್ಜನೆ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಡಿ.2 ಮತ್ತು 3ರಂದು ಮಾಲಾ ವಿಸರ್ಜನೆ ಕಾರ್ಯಕ್ರಮ ಜರುಗಲಿದ್ದು, ಅಂಜನಾದ್ರಿ ಬೆಟ್ಟ ಮತ್ತು ಭಕ್ತರ ನಡುವೆ ಭಾವನಾತ್ಮಕ ಸಂಬಂಧವಿದೆ.
ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಬೇಕಿದ್ದು, ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆವಹಿಸಬೇಕು. ಇಲಾಖೆಗೆ ವಹಿಸುವ ಜವಾಬ್ದಾರಿ ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ವಾಹನ ಪಾರ್ಕಿಂಗ್, ಏಕಮುಖ ಸಂಚಾರ, ಪ್ರಸಾದ ವ್ಯವಸ್ಥೆ, ಕುಡಿವ ನೀರು, ವಿದ್ಯುತ್ ಸೇರಿದಂತೆ ಇತರ ಸೌಲಭ್ಯಗಳನ್ನು ಕಾಲಮಿತಿಯೊಳಗೆ ವ್ಯವಸ್ಥೆಗೊಳಿಸಿಕೊಳ್ಳಬೇಕು.
ಅಂಜನಾದ್ರಿ ಬೆಟ್ಟದಲ್ಲಿ ಕೈಗೆತ್ತಿಕೊಂಡ ಅಭಿವದ್ಧಿ ಕಾರ್ಯ ವಿಳಂಬವಾಗುತ್ತಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಸಚಿವ ಮತ್ತು ಅಧಿಕಾರ ವರ್ಗ ಶ್ರಮಿಸುತ್ತಿದೆ. ಭೂಸ್ವಾಧೀನ ಪ್ರಕ್ರಿಯಿಗೆ ವೇಗ ದೊರೆಯಬೇಕಿದೆ ಎಂದರು
ತಹಸೀಲ್ದಾರ್ ಯು.ನಾಗರಾಜ ಮಾತನಾಡಿ, ಹನುಮಮಾಲಾ ವಿಸರ್ಜನೆ ನಿಮಿತ್ತ ಅಂಜನಾದ್ರಿ ಬೆಟ್ಟದಲ್ಲಿ ಹೋಮ, ಹವನ, ಪಾರಾಯಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಪ್ರಸಕ್ತ ಸಾಲಿನಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿದೆ.
ಭಕ್ತರಿಗೆ ವೇದಪಾಠ ಶಾಲೆ, ಪಂಪಾಸರೋವರ, ಅಂಜನಾದ್ರಿ ಪಾಕಿರ್ಂಗ್, ದುರ್ಗಾ ದೇವಿ ಬೆಟ್ಟ, ಹುಲಿಗಿ ದೇವಸ್ಥಾನದ ಬಳಿ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. 18 ಕಡೆ ಪಾಕಿರ್ಂಗ್, 3ಕಡೆ ಸ್ನಾನಘಟ್ಟ, ತಾತ್ಕಾಲಿಕ ಶೌಚಗೃಹ, ಬೆಟ್ಟಕ್ಕೆ ಲೈಟಿಂಗ್, ಆನೆಗೊಂದಿ-ಅಂ ಜನಾದ್ರಿ, ತಿರುಮಲಾಪುರ-ಅಂಜನಾದ್ರಿಗೆ ರಸ್ತೆ ಬದಿಯಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಲಾಗುವುದು ಎಂದರು.
ಮಾಲಾಧಾರಿಗಳು ಎಲ್ಲೆಂದರಲ್ಲಿ ತ್ಯಾಜ್ಯ ಹಾಕದಂತೆ ಎಚ್ಚರಿಕೆವಹಿಸಬೇಕಿದ್ದು, ತ್ಯಾಜ್ಯ ಸಂಗ್ರಹ ಘಟಕದ ವ್ಯವಸ್ಥೆ ಮತ್ತು ತುರ್ತು ಚಿಕಿತ್ಸೆ ಘಟಕ ತೆರೆಯಲು ಸ್ಥಳೀಯರು ಸಲಹೆ ನೀಡಿದರು.
ರಾಜವಂಶಸ್ಥೆ ಲಲಿತಾರಾಣಿ ರಾಯಲು, ತಾಪಂ ಇಒ ರಾಮರೆಡ್ಡಿ ಪಾಟೀಲ್, ಗ್ರಾಮೀಣ ಪಿಐ ರಂಗಪ್ಪ ದೊಡ್ಡಮನಿ, ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ, ಜಿಪಂ ಮಾಜಿ ಸದಸ್ಯ ಅಮರೇಶ ಗೋನಾಳ, ಮುಖಂಡರಾದ ಮನೋಹರಸ್ವಾಮಿ ಹಿರೇಮಠ, ಸಂತೋಷ ಕೆಲೋಜಿ, ವಿನಯ್ ಪಾಟೀಲ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net