ಕನಕಗಿರಿ: ಮುಂಗಾರು ಮಳೆ ಅಭಾವದಿಂದ ಬಿತ್ತಿದ ತೊಗರಿ ಬೆಳೆ ಉಳಿಸಿಕೊಳ್ಳಲು ಪಟ್ಟಣದ ರೈತ ಭೀಮೇಶ ಟ್ಯಾಂಕರ್ ಮೂಲಕ ನೀರುಣಿಸುತ್ತಿದ್ದಾರೆ. 8 ಎಕರೆ ಜಮೀನಿನಲ್ಲಿ ತೊಗರಿ ಬಿತ್ತಿ ಒಂದೂವರೆ ತಿಂಗಳಾಗಿದೆ.
ಬೆಳೆ ಉಳಿಸಿಕೊಳ್ಳಲು 2 ಟ್ಯಾಂಕರ್ ಮೂಲಕ ನೀರು ಹರಿಸಿ ಸಾವಿರಾರು ರೂ. ಖರ್ಚು ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಮಳೆ ಬಾರದಿದ್ದರೆ ಬಿತ್ತನೆ ಖರ್ಚಿನ ಜತೆಗೆ ಟ್ಯಾಂಕರ್ ಮೂಲಕ ನೀರುಣಿಸಿದ ಖರ್ಚು ಸಹ ಹೆಚ್ಚಾಗುವ ಆತಂಕ ಎದುರಾಗಿದೆ ಎನ್ನುತ್ತಾರೆ ರೈತ ಭೀಮೇಶ.