ಪ್ರಾಣಿಗಳ ಬಗ್ಗೆ ದಯೆ ಇರಲಿ

ಕೊಪ್ಪಳದಲ್ಲಿ ಆಯೋಜಿಸಿದ್ದ ಒಂದು ದಿನದ ತಾಂತ್ರಿಕ ಕಾರ್ಯಾಗಾರದಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ವಾತನಾಡಿದರು. ಡಿಎಫ್‌ಒ ಕೆ. ನಿರ್ಮಲಾ, ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ. ರಮೇಶ ಡೊಡ್ಮನಿ, ವಿಷಯ ತಜ್ಞ ಡಾ. ವಿವೇಕ ಕಸರಳಿಕರ, ಪ್ರಾಧ್ಯಾಪಕ ಡಾ.ಎನ್.ಬಿ. ಶ್ರೀಧರ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ ಇದ್ದರು.
ಕೊಪ್ಪಳದಲ್ಲಿ ಆಯೋಜಿಸಿದ್ದ ಒಂದು ದಿನದ ತಾಂತ್ರಿಕ ಕಾರ್ಯಾಗಾರದಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ವಾತನಾಡಿದರು. ಡಿಎಫ್‌ಒ ಕೆ. ನಿರ್ಮಲಾ, ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ. ರಮೇಶ ಡೊಡ್ಮನಿ, ವಿಷಯ ತಜ್ಞ ಡಾ. ವಿವೇಕ ಕಸರಳಿಕರ, ಪ್ರಾಧ್ಯಾಪಕ ಡಾ.ಎನ್.ಬಿ. ಶ್ರೀಧರ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಡಾ. ಸುರೇಶ ಬಿ. ಇಟ್ನಾಳ ಮನವಿ
  • ಒಂದು ದಿನದ ತಾಂತ್ರಿಕ ಕಾರ್ಯಾಗಾರ
ಕೊಪ್ಪಳ: ಪ್ರಾಣಿಗಳ ಬಗ್ಗೆ ದಯೆ ತೋರುವುದು ವಾನವೀಯತೆಯ ಲಕ್ಷಣ. ಪ್ರಾಣಿ ಸಂರಕ್ಷಣೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ತಿಳಿಸಿದರು.
ನಗರದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಒಂದು ದಿನದ ತಾಂತ್ರಿಕ ಕಾರ್ಯಾಗಾರದಲ್ಲಿ ವಾತನಾಡಿದರು.
ಪ್ರಾಣಿ ಕಲ್ಯಾಣವು ಕೇವಲ ಪ್ರಾಣಿಗಳ ರಕ್ಷಣೆಗಷ್ಟೇ ಸೀಮಿತವಲ್ಲ. ಅದು ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ಗ್ರಾಮೀಣ ಆರ್ಥಿಕತೆಗೆ ಸಂಬಂಧಿಸಿದೆ. ಪ್ರಾಣಿಗಳ ಮೇಲಿನ ಹಿಂಸೆ ತಡೆಯುವುದು ಹಾಗೂ ಅವುಗಳಿಗೆ ಸೂಕ್ತ ಆಶ್ರಯ, ಆಹಾರ ಮತ್ತು ಚಿಕಿತ್ಸೆ ಒದಗಿಸುವುದು ಸವಾಜದ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ, ನಿಯಮಿತ ಲಸಿಕಾ ಕಾರ್ಯಕ್ರಮ, ರೇಬೀಸ್ ತಡೆ ಹಾಗೂ ಪಶು ವೈದ್ಯಕೀಯ ಶಿಬಿರಗಳನ್ನು ಸಮನ್ವಯದೊಂದಿಗೆ ನಡೆಸುವ ಅಗತ್ಯವಿದೆ ಎಂದರು.
ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ. ರಮೇಶ ದೊಡ್ಮನಿ ವಾತನಾಡಿ, ವೈದ್ಯರು ಈ ತಾಂತ್ರಿಕ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ಆದೇಶದಂತೆ ಪ್ರಾಣಿಗಳಿಗೆ ಹಿಂಸೆಯಾಗದಂತೆ ವೈಜ್ಞಾನಿಕವಾಗಿ ಚಿಕಿತ್ಸೆ ಮತ್ತು ಲಸಿಕೆ ನೀಡಬೇಕು ಎಂದರು.
ಕೊಪ್ಪಳ ಡಿಎಫ್‌ಒ ಕೆ. ನಿರ್ಮಲಾ, ವಿಷಯ ತಜ್ಞರಾದ ಬೀದರ ಪಶುವೈದ್ಯಕೀಯ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಿವೇಕ ಕಸರಳಿಕರ, ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ.ಎನ್.ಬಿ. ಶ್ರೀಧರ, ಹ್ಯೂಮೇನ್ ವರ್ಲ್ಡ ಫಾರ್ ಇಂಡಿಯಾ ಫೌಂಡೇಷನ್ ಹಿರಿಯ ತಜ್ಞ ರಮೇಶ ಭಜಂತ್ರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ಶರಣಬಸಪ್ಪ ರೋಣ ಇತರರಿದ್ದರು.

2 ಪಪಂಗೆ ಪ್ರಶಂಸೆ ಪತ್ರ ವಿತರಣೆ

ಬೀದಿ ನಾಯಿಗಳ ನಿಯಂತ್ರಣ ಕುರಿತ ಸುಪ್ರೀಂಕೋರ್ಟ್ ಆದೇಶದಂತೆ ಕಾರ್ಯನಿರ್ವಹಿಸಿ ಶೇ.100 ಪ್ರಗತಿ ಸಾಧಿಸಿರುವುದಕ್ಕಾಗಿ ಯಲಬುರ್ಗಾ ಮತ್ತು ಕುಕನೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ ಹಾಗೂ ಕಾರಟಗಿ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೇಕಾರ ಅವರಿಗೆ ಕಾರ್ಯಾಗಾರದಲ್ಲಿ ಪ್ರಶಂಸಾ ಪತ್ರ ವಿತರಣೆ ವಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net