ಗುಲಾಮಗಿರಿ ಪದ್ಧತಿ ಜಾರಿಗೆ ಹುನ್ನಾರ

ಗಂಗಾವತಿಯ ಸಿಬಿಎಸ್ ವೃತ್ತದಲ್ಲಿ ಸಿಐಟಿಯು ತಾಲೂಕು ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಲಕ್ಷ್ಮೀದೇವಿ, ದುರುಗಮ್ಮ, ಎ.ರಮೇಶ, ಕೃಷ್ಣಪ್ಪನಾಯಕ ಇತರರಿದ್ದರು.
ಗಂಗಾವತಿಯ ಸಿಬಿಎಸ್ ವೃತ್ತದಲ್ಲಿ ಸಿಐಟಿಯು ತಾಲೂಕು ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಲಕ್ಷ್ಮೀದೇವಿ, ದುರುಗಮ್ಮ, ಎ.ರಮೇಶ, ಕೃಷ್ಣಪ್ಪನಾಯಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಮಿಕ ವಿರೋಧಿ ಸಂಹಿತೆ

ಗುಲಾಮಗಿರಿ ಪದ್ಧತಿ ಜಾರಿಗೆ ಹುನ್ನಾರ

ಗಂಗಾವತಿ: ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸಿಐಟಿಯು ತಾಲೂಕು ಸಮಿತಿಯಿಂದ ನಗರದ ಸಿಬಿಎಸ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಕಾರ್ಪೋರೇಟ್ ಕಂಪನಿಗಳ ಪರವಾಗಿರುವ ಕೇಂದ್ರ ಸರ್ಕಾರ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ್ದು, ಇವು ಕೈಗಾರಿಕೆ, ಸಾಮಾಜಿಕ ಭದ್ರತೆ, ವೃತ್ತಿ ಸುರಕ್ಷತೆ, ಆರೋಗ್ಯ ಸ್ಥಿತಿಗತಿಗೆ ಮಾರಕವಾಗಿವೆ.
ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಜಂಟಿ ಹೋರಾಟ ನಡೆಸಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ದುಡಿವ ವರ್ಗದ ಅಭಿಪ್ರಾಯ ತಿರಸ್ಕೃರಿಸಿರುವ ಕೇಂದ್ರ ಸರ್ಕಾರ, ವಿದೇಶಿ ಮತ್ತು ಸ್ವದೇಶಿ ಬಂಡವಾಳ ಹೂಡಿಕೆದಾರರ ಅನುಕೂಲಕ್ಕಾಗಿ ತರಾತುರಿಯಲ್ಲಿ ಸಂಹಿತೆಗಳನ್ನು ಜಾರಿಗೊಳಿಸಿದೆ.
ಇದರಿಂದ ಯುವಪೀಳಿಗೆಗೆ ಕಾಯಂ ಉದ್ಯೋಗಾವಕಾಶ ಇಲ್ಲದಂತಾಗುತ್ತದೆ. ಕೇಂದ್ರ ಸರ್ಕಾರ ಗುಲಾಮಗಿರಿ ಪದ್ಧತಿ ಜಾರಿಗೊಳಿಸುವ ಹುನ್ನಾರ ನಡೆಸಿದ್ದು, ಸಂಹಿತೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬಾರದೆಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ, ಪ್ರಮುಖರಾದ ಲಕ್ಷ್ಮೀದೇವಿ, ದುರುಗಮ್ಮ, ಎ.ರಮೇಶ, ಕೃಷ್ಣಪ್ಪನಾಯಕ, ಮಂಜುನಾಥ, ರಹೀಂಸಾಬ್, ಟಿ.ನಬೀಸಾಬ್, ರಾಜಾಸಾಬ್, ಈರಣ್ಣ, ಬಸವರಾಜ್, ಶಂಕರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net