ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯ, ಉತ್ತಮ ಶಿಕ್ಷಣ ಹಾಗೂ ಸಂಸ್ಕಾರಯುತ ಜೀವನಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಠದ ಆವರಣದಲ್ಲಿ ದಿನವಿಡೀ ಭಕ್ತರ ಸಂಚಾರ ಹೆಚ್ಚಿದ್ದು, ಧಾರ್ಮಿಕ ಹಾಗೂ ಹಬ್ಬದ ವಾತಾವರಣ ನಿಮಾರ್ಣವಾಗಿತ್ತು. ಅಕ್ಷರಾಭ್ಯಾಸದ ಬಳಿಕ ಮಠಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ಶ್ರೀಮಠದ ದಾಸೋಹ ಭವನದಲ್ಲಿ ಮಹಾಪ್ರಸಾದ ಸ್ವೀಕರಿಸಿದರು. ಮಹಿಳೆಯರು, ಹಿರಿಯರು ಹಾಗೂ ಮಕ್ಕಳು ಸಾಗರೋಪಾದಿಯಲ್ಲಿ ಭಾಗವಹಿಸಿ ಶ್ರೀಗಳ ಕೃಪೆಗೆ ಪಾತ್ರರಾದರು.