ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ರಡ್ಡಿ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಪ್ರಮುಖರಾದ ಜಗದೀಶಪ್ಪ ಸಿಗ್ನಾಳ, ಮಹಾಲಿಂಗಪ್ಪ ಹರಕೆರಿ, ಹೇಮರಡ್ಡಿ ಬಿಸರಳ್ಳಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸ್ಥಿತಪ್ರಜ್ಞ
ಸ್ತ್ರೀಶಕ್ತಿ
ಮಹಾಸಾಧ್ವಿಯ ಸ್ಥಿತಪ್ರಜ್ಞ ಸ್ತ್ರೀಶಕ್ತಿಯ ಸಂಕೇತ
ಕೊಪ್ಪಳ: ಮಲ್ಲಮ್ಮನ ವ್ಯಕ್ತಿತ್ವ ಭಾರತೀಯ ಮಹಿಳೆಯರಿಗೆ ಮಾದರಿ. ಉತ್ತಮ ನಡತೆಯ ಮೂಲಕ ಕುಟುಂಬದ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದ್ದರು. ಸಂಸಾರದ ಜತೆಗೆ ಇಡೀ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು. ಮಹಿಳೆಯರು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಎಂದರು.
ನಗರದ ಕಿನ್ನಾಳ ರಸ್ತೆಯಲ್ಲಿನ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೇಮರಡ್ಡಿ ಮಲ್ಲಮ್ಮ ಅವರ ಬದುಕು ಸ್ಥಿತಪ್ರಜ್ಞತೆ ಕಲಿಸುತ್ತದೆ. ಸ್ತ್ರೀ ಶಕ್ತಿಯ ಸಂಕೇತವಾಗಿರುವ ಮಲ್ಲಮ್ಮ, ಸಂಸಾರದಲ್ಲಿ ಇದ್ದು ಭಕ್ತಿಯ ಉತ್ತುಂಗ ತಲುಪಬಹುದು ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆ. ಜಯಂತಿ ಕೇವಲ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಬಾರದು. ಸರ್ಕಾರ ರಡ್ಡಿ ಸಮುದಾಯದ ಅಭಿವೃದ್ಧಿಗೆ ಮುಂದಾಗಲಿ ಎಂದರು.
ಜೆಡಿಎಸ್ ರಾಜ್ಯ ಕೋರ್ ಕಮಿತಿ ಸದಸ್ಯ ಸಿ.ವಿ.ಚಂದ್ರಶೇಖರ ಮಾತನಾಡಿ, ಮಹಾಸಾದ್ವಿ ಮಲ್ಲಮ್ಮ ಸಂಸಾರದಲ್ಲಿ ಎಷ್ಟೇ ಕಷ್ಟಗಳು ಬಂದರೂ ಶ್ರೀಶೈಲ ಮಲ್ಲಿಕಾರ್ಜುನನ ಆರಾಧಿಸುತ್ತಾ ಎಲ್ಲರಿಗೂ ಉತ್ತಮ ಜೀವನ ದೊರೆಯಲಿ ಎಂದು ಪ್ರಾರ್ಥಿಸುತ್ತಿದ್ದರು.
ರಡ್ಡಿ ಸಮುದಾಯದವರು ತಮ್ಮೊಂದಿಗೆ ಇತರರನ್ನೂ ಬೆಳೆಸುವ ಗುಣ ಹೊಂದಿದ್ದಾರೆ ಎಂದು ಹೇಳಿದರು. ಸಿಂಧನೂರಿನ ಜನಪದ ಸಾಹಿತಿ ವೆಂಕನಗೌಡ ವಟಗಲ್ ಮಾತನಾಡಿ, ಸಂಸಾರದ ಜಂಜಾಟದ ನಡುವೆಯೂ ಭಕ್ತಿ ಮತ್ತು ಸಹನೆಯಿಂದ ಅಧ್ಯಾತ್ಮದ ಉತ್ತುಂಗಕ್ಕೇರಿದ ಹೇಮರಡ್ಡಿ ಮಲ್ಲಮ್ಮ ಅವರ ಜೀವನ ಸ್ತ್ರೀಯರಿಗೆ ಹಾಗೂ ಸಮಾಜಕ್ಕೆ ದಾರಿದೀಪ
ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲದ ತಿಲಕ ಎಂದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ರಡ್ಡಿ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.