ಕೊಪ್ಪಳದಲ್ಲಿ ಶುಕ್ರವಾರ ಕರೆದ 2026-&27ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯಲ್ಲಿ ಡಿಸಿ ಡಾ.ಸುರೇಶ ಬಿ. ಇಟ್ನಾಳ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಎಸಿ ಕ್ಯಾ. ಮಹೇಶ್ ಮಾಲಗಿತ್ತಿ, ಎಎಸ್ಪಿ ಆರ್. ಹೇಮಂತ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ, ಕೊಪ್ಪಳ ತಸೀಲ್ದಾರ ಬಸವರಾಜ ತೆನ್ನಳ್ಳಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಡಿಸಿ ಡಾ. ಸುರೇಶ್ ಇಟ್ನಾಳ ಸೂಚನೆ
ಮುಂಗಾರು ಪೂರ್ವ ಸಿದ್ಧತಾ ಸಭೆ
ಕೊಪ್ಪಳ : ಜಿಲ್ಲೆಯ ರೈತರಿಗೆ 2026ರ ಮುಂಗಾರು ಹಂಗಾಮಿನ ಬೆಳೆಗೆ ರಸಗೊಬ್ಬರದ ಯಾವುದೇ ಕೊರತೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2026-&27ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಇರಾನ್ ಸೇರಿದಂತೆ ವಿವಿಧ ದೇಶಗಳ ನಡುವಿನ ಯುದ್ಧದ ಪರಿಸ್ಥಿತಿಯಿಂದಾಗಿ ಕಚ್ಚಾ ವಸ್ತುಗಳ ಆಮದಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈ ಸವಾಲನ್ನು ಎದುರಿಸಲು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳುವುದು ಅತ್ಯಗತ್ಯ ಎಂದರು.
ತುರ್ತು ಸಂದರ್ಭಗಳ ಬಳಕೆಗಾಗಿ ಜಿಲ್ಲೆಯಲ್ಲಿ ಶೇ. 25ರಷ್ಟು ರಸಗೊಬ್ಬರವನ್ನು ಕಾಯ್ದಿರಿಸಬೇಕು. ಯೂರಿಯಾ ರಸಗೊಬ್ಬರವು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆಯಾಗುವುದನ್ನು ತಡೆಯಲು ಕೈಗಾರಿಕೆಗಳ ಮೇಲೆ ಮಿಷನ್ ಮೋಡ್ ನಲ್ಲಿ ದಾಳಿ ನಡೆಸಿ ಪರಿಶೀಲಿಸಬೇಕು. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಚಿಲ್ಲರೆ ಮಾರಾಟಗಾರರು ಪೋಸ್ ಯಂತ್ರದ ಮೂಲಕ ಕಡ್ಡಾಯವಾಗಿ ವಹಿವಾಟು ದಾಖಲಿಸಬೇಕು ಎಂದು ತಿಳಿಸಿದರು.
ಧರ್ತಿ ಮಾತಾ ಬಚಾವೋ ಸಮಿತಿಗಳನ್ನು ಗ್ರಾಮ ಮಟ್ಟದವರೆಗೆ ಚುರುಕುಗೊಳಿಸಿ, ಸಮಗ್ರ ರಸಗೊಬ್ಬರ ನಿರ್ವಹಣೆ ಹಾಗೂ ಪರ್ಯಾಯ ಗೊಬ್ಬರಗಳ ಬಳಕೆಗೆ ರೈತರನ್ನು ಪ್ರೇರೇಪಿಸಬೇಕು. ಸರ್ಕಾರದಿಂದ ಯೂರಿಯಾಕ್ಕೆ ಹೆಚ್ಚಿನ ಸಬ್ಸಿಡಿ ನೀಡಲಾಗುತ್ತಿದ್ದು, ಪ್ರತಿ ತಿಂಗಳು ದೊಡ್ಡ ಖರೀದಿದಾರರ ವಿವರಗಳನ್ನು ಐಎಫ್ಎಂಎಸ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಎಸಿ ಕ್ಯಾ. ಮಹೇಶ್ ಮಾಲಗಿತ್ತಿ, ಎಎಸ್ಪಿ ಆರ್. ಹೇಮಂತ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ, ಕೊಪ್ಪಳ ತಸೀಲ್ದಾರ ಬಸವರಾಜ ತೆನ್ನಳ್ಳಿ ಇತರರಿದ್ದರು.