ನಾಗರಾಳ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನರಿಗೆ ಆರೋಗ್ಯ ಭದ್ರತೆ ಮತ್ತು ಜೀವನೋಪಾಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೀರಪ್ಪ ಮಾತನಾಡಿದರು. ಬಿಆರ್‌ಸಿ ಸಮನ್ವಯಾಧಿಕಾರಿ ಜಗದೀಶಪ್ಪ ಎಂ., ಶಿಕ್ಷಣ ಸಂಯೋಜಕ ಶಿವಬಸಪ್ಪ ಗುಮಗೇರಿ ಇತರ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆರೋಗ್ಯ
ಚೆನ್ನಾಗಿ
ಕಾಪಾಡಿ
ಕುಷ್ಟಗಿ: ಗ್ರಾಮೀಣ ಪ್ರದೇಶದ ನಾಗರಿಕರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೀರಪ್ಪ ಹೇಳಿದರು.
ತಾಲೂಕಿನ ಗುಮಗೇರಾ ಪಂಚಾಯತಿ ವ್ಯಾಪ್ತಿಯ ನಾಗರಾಳ ಗ್ರಾಮದಲ್ಲಿ ತಾಲೂಕು ಆಡಳಿತ ತಾಪಂ ಹಾಗೂ ಪರಿಶಿಷ್ಟ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬುಡಕಟ್ಟು ಸಮುದಾಯದ ಜನರಿಗೆ ಆರೋಗ್ಯ ಭದ್ರತೆ ಮತ್ತು ಜೀವನೋಪಾಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.
ಬುಡಕಟ್ಟು ಸಮುದಾಯದವರಿಗೆ ವಿವಿಧ ಇಲಾಖೆಗಳಿಂದ ಮೂಲ ಸೌಕರ್ಯ ಒದಗಿಸುವ ಕಾರ್ಯ ಪ್ರಾಮಾಣಿಕವಾಗಿ ನಡೆದಿದೆ. ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಶಿಕ್ಷಣ ಇಲಾಖೆ ಬಿಆರ್‌ಸಿ ಸಮನ್ವಯಾಧಿಕಾರಿ ಜಗದೀಶಪ್ಪ ಎಂ., ಶಿಕ್ಷಣ ಸಂಯೋಜಕ ಶಿವಬಸಪ್ಪ ಗುಮಗೇರಿ ಇತರರಿದ್ದರು.