ನಿಲ್ದಾಣದಲ್ಲಿ ಬಳಕೆಗೆ ದೊರೆಯದ ಶೌಚಗೃಹ

ಬಸ್ ನಿಲ್ದಾಣದಲ್ಲಿರುವ ಮಹಿಳೆಯರ ವಿಶ್ರಾಂತಿ ಕೊಠಡಿಗೆ ಬೀಗ ಹಾಕಿರುವುದು.
ಬಸ್ ನಿಲ್ದಾಣದಲ್ಲಿರುವ ಮಹಿಳೆಯರ ವಿಶ್ರಾಂತಿ ಕೊಠಡಿಗೆ ಬೀಗ ಹಾಕಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಸಿದ್ದಾಪುರದಲ್ಲಿ ಪ್ರಯಾಣಿಕರ ಪರದಾಟ
  • ಮಹಿಳೆಯರ ವಿಶ್ರಾಂತಿ ಕೊಠಡಿಗೂ ಬೀಗ
ಸಿದ್ದಾಪುರ: ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವಾಗಿದ್ದರೂ ಅದಕ್ಕೆ ತಕ್ಕಂತೆ ಮೂಲ ಸೌಲಭ್ಯಗಳು ಇಲ್ಲದಿರುವುದು ಪ್ರಯಾಣಿಕರಿಗೆ ಸಮಸ್ಯೆ ತಂದೊಡ್ಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2014ರಲ್ಲಿ ನಿಲ್ದಾಣವನ್ನು ಉದ್ಘಾಟಿಸಿದ್ದರು. ಉದ್ಘಾಟನೆಯಾಗಿ ಅನೇಕ ವರ್ಷ ಕಳೆದರೂ ಸಮರ್ಪಕ ಸೌಲಭ್ಯಗಳಿಲ್ಲ. ಈ ಮಾರ್ಗದ ಪ್ರಯಾಣಿಕರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರ ಬಳಕೆಗೆ ಶೌಚಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಇವುಗಳು ಆಟಿಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಸ್ಥಿತಿಯಲ್ಲಿವೆ. ಶೌಚಗೃಹಗಳಿಗೆ ಬೀಗ ಹಾಕಲಾಗಿದೆ.
ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದ್ದು, ಇದಕ್ಕೂ ಸಹ ಬೀಗ ಹಾಕಲಾಗಿದೆ. ಪ್ರಯಾಣಿಕರು ನಿಲ್ದಾಣದ ಹಿಂಬದಿಯ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಹರಡುತ್ತದೆ. ಸಾರ್ವಜನಿಕರು ಮೂಲ ಸೌಕರ್ಯಗಳಿಂದ ವಂಚಿತರಾಗುವ ಜತೆಗೆ ದುರ್ವಾಸನೆ ನಡುವೆಯೇ ಪ್ರಯಾಣಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಪ್ರಯಾಣಿಕರಿಗೆ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯ ಒದಗಿಸಬೇಕು ಎನ್ನುವುದು ಜನರ ಒತ್ತಾಯವಾಗಿದೆ.

ಸಿಸಿ ಕ್ಯಾಮರಾ ಇಲ್ಲ

ಬಸ್ ಏರುವಾಗ ಕಳ್ಳತನ ಮಾಡಿ ಪರಾರಿಯಾದ ಉದಾಹರಣೆಗಳಿವೆ. ಅನೇಕರು ವಸ್ತುಗಳನ್ನು ಹಾಗೂ ಹಣ ಕಳೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ನಿಲ್ದಾಣಕ್ಕೆ ಈವರೆಗೆ ಸಿಸಿ ಕ್ಯಾಮರಾ ಅಳವಡಿಸಿಲ್ಲ.

ಶೌಚಗೃಹ ನಿರ್ಮಾಣ ಮಾಡಿದರೆ ತೆರೆಯಬೇಕು. ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಶೌಚಗೃಹಗಳನ್ನು ಪ್ರಯಾಣಿಕರ ಬಳಕೆಗೆ ನೀಡಲು ಸೂಚನೆ ನೀಡುತ್ತೇನೆ. ಮಹಿಳೆಯರ ವಿಶ್ರಾಂತಿ ಕೊಠಡಿಗಳನ್ನು ತೆರೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net