ವೈಜ್ಞಾನಿಕ ಕೃಷಿಯಿಂದ ಉತ್ತಮ ಇಳುವರಿ

ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಹತ್ತಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಸಹ ವಿಸ್ತೀರ್ಣ ನಿರ್ದೇಶಕ ಡಾ.ಜಯಪ್ರಕಾಶ ಮೋಹನ ನಿಡಗುಂದಿ ಮಾತನಾಡಿದರು. ಕೃಷಿ ವಿಸ್ತೀರ್ಣ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ.ಬದರಿ ಪ್ರಸಾದ, ಆಡಳಿತ ಮಂಡಳಿ ಸದಸ್ಯ ತಿಮ್ಮಣ್ಣ ಚವಡಿ, ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಡಾ.ಜಯಪ್ರಕಾಶ ಮೋಹನ ನಿಡಗುಂದಿ ಸಲಹೆ
  • ಹತ್ತಿ ಬೆಳೆಯಲ್ಲಿ ತಾಂತ್ರಿಕತೆ ಕುರಿತು ತರಬೇತಿ ಕಾರ್ಯಾಗಾರ
ಯಲಬುರ್ಗಾ: ಹತ್ತಿ ಬೆಳೆಯಲ್ಲಿ ಉತ್ಪಾದನೆ ಹಾಗೂ ಗುಣಮಟ್ಟ ಹೆಚ್ಚಿಸಲು ರೈತರು ನೂತನ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯ ಸಹ ವಿಸ್ತೀರ್ಣ ನಿರ್ದೇಶಕ ಡಾ.ಜಯಪ್ರಕಾಶ ಮೋಹನ ನಿಡಗುಂದಿ ಹೇಳಿದರು.
ಪಟ್ಟಣದ ಕಂದಾಯ ಭವನದಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಹತ್ತಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಕುರಿತು ರೈತರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಹಾಗೂ ಕೃಷಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಹತ್ತಿ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಹವಾಮಾನ ವೈಪರೀತ್ಯ, ರೋಗ ಬಾಧೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಳದಿಂದ ರೈತರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ವೈಜ್ಞಾನಿಕ ಕೃಷಿ ಪದ್ಧತಿ, ಸಮತೋಲನ ಗೊಬ್ಬರ ಬಳಕೆ, ಹನಿ ನೀರಾವರಿ, ಮಣ್ಣು ಪರೀಕ್ಷೆ ಹಾಗೂ ಸಮಗ್ರ ಕೀಟ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.
ಕೃಷಿ ವಿಸ್ತೀರ್ಣ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ.ಬದರಿ ಪ್ರಸಾದ ಮಾತನಾಡಿ, ರೈತರು ಕೃಷಿ ತಜ್ಞರ ಸಲಹೆ ಪಾಲಿಸಿದರೆ ಬೆಳೆ ಹಾನಿ ತಡೆಯಬಹುದು. ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿಕೊರಕ, ಎಲೆಚುಕ್ಕೆ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರೈತರು ನಿಯಮಿತವಾಗಿ ಜಮೀನುಗಳಲ್ಲಿ ಪರಿಶೀಲಿಸಿ ಸಮಸ್ಯೆ ಕಂಡುಬಂದರೆ ಕೃಷಿ ಇಲಾಖೆಗೆ ಸಂಪರ್ಕಿಸಬೇಕು ಎಂದು ತಿಳಿಸಿದರು. ರೈತರು ತಜ್ಞರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಆಡಳಿತ ಮಂಡಳಿ ಸದಸ್ಯ ತಿಮ್ಮಣ್ಣ ಚವಡಿ, ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net