ಉರ್ದು ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಲಿ

ಪ್ರಸ್ತುತ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲೇ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ ತಕ್ಷಣ ವಿಶೇಷ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಎಡಿಸಿ ಸಿದ್ರಾಮೇಶ್ವರಗೆ ಮನವಿಸ ಸಲ್ಲಿಸಲಾಯಿತು. ಶಾಲಾ ಕಾಲೇಜು ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಸ್​.ಎ.ಗಫಾರ್​, ಪ್ರಮುಖರಾದ ಬಸವರಾಜ್​ ಶೀಲವಂತರ್​, ಶರಣು ಗಡ್ಡಿ, ಚನ್ನಬಸಪ್ಪ ಅಪ್ಪಣ್ಣವರ್​ ಇದ್ದರು.
ಪ್ರಸ್ತುತ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲೇ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ ತಕ್ಷಣ ವಿಶೇಷ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಎಡಿಸಿ ಸಿದ್ರಾಮೇಶ್ವರಗೆ ಮನವಿಸ ಸಲ್ಲಿಸಲಾಯಿತು. ಶಾಲಾ ಕಾಲೇಜು ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಸ್​.ಎ.ಗಫಾರ್​, ಪ್ರಮುಖರಾದ ಬಸವರಾಜ್​ ಶೀಲವಂತರ್​, ಶರಣು ಗಡ್ಡಿ, ಚನ್ನಬಸಪ್ಪ ಅಪ್ಪಣ್ಣವರ್​ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಸಂಘಟನೆಗಳಿಂದ ಮನವಿ

ಕೊಪ್ಪಳ : ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ 15,000 ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲಾ ಶಿಕ್ಷಕರ ಹುದ್ದೆ ಕಡೆಗಣಿಸಿದೆ. ತಕ್ಷಣವೇ ಪೂರಕ ಆದೇಶ ಹೊರಡಿಸಿ ಉರ್ದು ಶಿಕ್ಷಕರ ನೇಮಕಾತಿಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಲಾ ಕಾಲೇಜು ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಎಡಿಸಿ ಸಿದ್ರಾಮೇಶ್ವರ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರ 15,000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವುದು ಪ್ರಗತಿಪರ ಹೆಜ್ಜೆಯಾಗಿದ್ದರೂ,ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸಂಪೂರ್ಣ ಹೊರಗಿಟ್ಟಿರುವುದು ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ ಎಸಗಿದ ಶೈಕ್ಷಣಿಕ ಅನ್ಯಾಯವಾಗಿದೆ. ಉರ್ದು ಶಿಕ್ಷಕರ ನೇಮಕಾತಿ ತಡೆಯುವುದು ಈ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿದರು.
ರಾಜ್ಯದ ನೂರಾರು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಿಕ್ಷಕರಿಲ್ಲದೆ ಹಲವು ಶಾಲೆಗಳು ಮುಚ್ಚುವ ಹಂತ ತಲುಪಿವೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಸಮುದಾಯಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನ ಅವಕಾಶ ಒದಗಿಸುವುದು ಸಾಮಾಜಿಕ ನ್ಯಾಯದ ಹಕ್ಕಾಗಿದೆ. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಲ್ಲೇ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ ತಕ್ಷಣ ವಿಶೇಷ ಅಧಿಸೂಚನೆ ಹೊರಡಿಸಬೇಕು ಹಾಗೂ ಉರ್ದು ಮಾಧ್ಯಮ ಶಾಲೆಗಳ ಉಳಿವು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಶಾಲಾ ಕಾಲೇಜು ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಸ್​.ಎ.ಗಫಾರ್​, ಗೌರವ ಅಧ್ಯಕ್ಷ ಬಸವರಾಜ್​ ಶೀಲವಂತರ್​, ಪ್ರಮುಖರಾದ ಶರಣು ಗಡ್ಡಿ, ಚನ್ನಬಸಪ್ಪ ಅಪ್ಪಣ್ಣವರ್​, ಮಖಬೂಲ್​ ರಾಯಚೂರು, ಮೌಲಾ ಹುಸೇನ್​ ಹಣಗಿ, ಗಾಳೆಪ್ಪ ಮುಂಗೋಲಿ, ನಯೀಮುರ್​ ರಹೆಮಾನ್​, ಕುಮಾರಿ ಅನ್ವರ್​ ಬಾನು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net