ಗ್ರಾಮೀಣ ಆರ್ಥಿಕತೆಗೆ ವಿಬಿ ಜೀ-ರಾಮ್​ಜೀ ವರದಾನ

ತಾಲೂಕಿನ ಬಹದ್ದೂರಬಂಡಿಯಲ್ಲಿ ವಿಕಸಿತ ಭಾರತ ಜೀ-ರಾಮ್​ಜೀ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ವಿಶೇಷ ಗ್ರಾಮಸಭೆಯಲ್ಲಿ ಗ್ರಾಪಂ ಪಿಡಿಒ ಬಸವರಾಜ ರ್ಕಿದಿ ಮಾತನಾಡಿದರು. ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಪಂ ಆಡಳಿತಾಧಿಕಾರಿ ನಾಗರತ್ನ, ಪಶುವೈದ್ಯಾಧಿಕಾರಿ ವಿನಯ ಅಂಗಡಿ, ಪ್ರಮುಖರಾದ ಸುನೀಲ್​, ಗುರುರಾಜ, ರತ್ನಮ್ಮ ಹೊಸಳ್ಳಿ ಇದ್ದರು.
ತಾಲೂಕಿನ ಬಹದ್ದೂರಬಂಡಿಯಲ್ಲಿ ವಿಕಸಿತ ಭಾರತ ಜೀ-ರಾಮ್​ಜೀ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ವಿಶೇಷ ಗ್ರಾಮಸಭೆಯಲ್ಲಿ ಗ್ರಾಪಂ ಪಿಡಿಒ ಬಸವರಾಜ ರ್ಕಿದಿ ಮಾತನಾಡಿದರು. ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಪಂ ಆಡಳಿತಾಧಿಕಾರಿ ನಾಗರತ್ನ, ಪಶುವೈದ್ಯಾಧಿಕಾರಿ ವಿನಯ ಅಂಗಡಿ, ಪ್ರಮುಖರಾದ ಸುನೀಲ್​, ಗುರುರಾಜ, ರತ್ನಮ್ಮ ಹೊಸಳ್ಳಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಿಡಿಒ ಬಸವರಾಜ ರ್ಕಿದಿ ಅಭಿಪ್ರಾಯ

ಕೊಪ್ಪಳ : ರೈತರು ಹಾಗೂ ಕೂಲಿಕಾರರ ಆರ್ಥಿಕ ಸಬಲೀಕರಣಕ್ಕೆ ವಿಕಸಿತ ಭಾರತ ಜೀ-ರಾಮ್​ಜೀ ಯೋಜನೆ ಮಹತ್ವದ ಕೊಡುಗೆ ನೀಡಲಿದ್ದು, ಗ್ರಾಮೀಣಾಭಿವೃದ್ಧಿಗೆ ಇದು ವರದಾನವಾಗಲಿದೆ ಎಂದು ಬಹದ್ದೂರಬಂಡಿ ಗ್ರಾಪಂ ಪಿಡಿಒ ಬಸವರಾಜ ರ್ಕಿದಿ ಹೇಳಿದರು.

ತಾಲೂಕಿನ ಬಹದ್ದೂರಬಂಡಿ ಗ್ರಾಪಂನಲ್ಲಿ ಬುಧವಾರ ಆಯೋಜಿಸಿದ್ದ 2026-27ನೇ ಸಾಲಿನ ವಿಕಸಿತ ಭಾರತ ಜೀ-ರಾಮ್​ಜೀ ಕ್ರಿಯಾ ಯೋಜನೆ ಸಿದ್ಧಪಡಿಸುವ ವಿಶೇಷ ಗ್ರಾಮಸಭೆಯಲ್ಲಿ ಮಾತನಾಡಿದರು.
ಕೃಷಿ, ತೋಟಗಾರಿಕೆ, ಅರಣ್ಯ ಹಾಗೂ ರೇಷ್ಮೆ ಇಲಾಖೆಗಳ ಮೂಲಕ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವಿವಿಧ ಸೌಲಭ್ಯಗಳನ್ನೂ ಪಡೆದುಕೊಳ್ಳಬಹುದಾಗಿದೆ. ಗ್ರಾಮಸ್ಥರಿಂದ ಸಲ್ಲಿಕೆಯಾಗಿರುವ ಕಾಮಗಾರಿಗಳ ಬೇಡಿಕೆಗಳನ್ನು ಸಭೆಯಲ್ಲಿ ವಿವರಿಸಿ, ಯೋಜನೆಯಡಿ ಅರ್ಹ ಫಲಾನುಭವಿಗಳು ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು.
ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ಗ್ರಾಮೀಣ ಕೂಲಿಕಾರರು ಗುಳೆ ಹೋಗುವುದನ್ನು ತಡೆದು ಸ್ಥಳಿಯ ಮಟ್ಟದಲ್ಲೇ ಒಂದು ಕುಟುಂಬಕ್ಕೆ 125 ದಿನಗಳ ಉದ್ಯೋಗ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಲ ಸಂರಕ್ಷಣೆ, ನೀರಾವರಿ, ಅಂತರಜಲ ಮರುಪೂರಣ, ಜಲಾನಯನ ಅಭಿವೃದ್ಧಿ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಯೋಜನೆಯಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಸಂಜೀವಿನಿ ಯೋಜನೆ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್​ ಮಾತನಾಡಿ, ಮಹಿಳಾ ಸಂಘಗಳ ಸದಸ್ಯರು ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಿ ಶಾಶ್ವತ ಆದಾಯದ ಮೂಲಗಳನ್ನು ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ಆಡಳಿತಾಧಿಕಾರಿ ನಾಗರತ್ನ, ಪಶುವೈದ್ಯಾಧಿಕಾರಿ ವಿನಯ ಅಂಗಡಿ, ತಾಂತ್ರಿಕ ಸಹಾಯಕ ಗುರುರಾಜ, ಪ್ರಮುಖರಾದ ರತ್ನಮ್ಮ ಹೊಸಳ್ಳಿ, ಎಂಬಿಕೆ ಶಕುಂತಲಾ, ಚಿನ್ನಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net