ರಸ್ತೆ ಮತ್ತು ಚರಂಡಿ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಒಂದು ವರ್ಷದ ಹಿಂದೆಯೇ ನೀರು ನಿಂತಿರುವ ಫೋಟೋ ಸಮೇತ ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗೆ ಮನವಿ ಸಲ್ಲಿಸಿದರೂ, ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳಿಯ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಂಪೂರ್ಣ ರ್ನಿಲಕ್ಷ್ಯವೇ ಈ ದು@ಸ್ಥಿತಿಗೆ ಕಾರಣವಾಗಿದ್ದು, ವದಗನಾಳ ಗ್ರಾಮಸ್ಥರು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಗ್ರಾಮಕ್ಕೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಿಕೊಟ್ಟು ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜನ ಆಗ್ರಹಿಸಿದ್ದಾರೆ.