ತಾಲೂಕಿನ ಹೊಸಕನಕಾಪುರ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಕಂದ ಸುಮಿ ಸ್ಪೇಷಲ್ ಸ್ಟೀಲ್ ಲಿಮಿಟೆಡ್ ಕಂಪನಿಯ ನೌಕರರು ಬ್ಯಾನರ್ಗಳು ಹಾಗೂ ಜಾಗೃತಿ ಫಲಕಗಳೊಂದಿಗೆ ನಡೆದ ಎಸ್ಐಆರ್ ಜಾಗೃತಿ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು. ತಾಪಂ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಪಿಡಿಒ ಮಂಜುಳಾದೇವಿ ಹೂಗಾರ, ಕಂಪನಿಯ ಓಂ ಪ್ರವಲ್ ಸಿಂಗ್, ಮಂಜುನಾಥ್ ಕುಲಕರ್ಣಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮಹೇಶ್ ಮನವಿ
ಎಸ್ಐಆರ್ ಜಾಗೃತಿ ಜಾಥಾ
ಕೊಪ್ಪಳ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ತಾಪಂ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಹೇಳಿದರು.
ತಾಲೂಕಿನ ಹೊಸಕನಕಾಪುರ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಎಸ್ಐಆರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವುದು, ಮರಣ ಹೊಂದಿರುವವರು, ಸ್ಥಳಾಂತರಗೊಂಡವರು, ನಕಲು ಹೆಸರುಗಳು ಹಾಗೂ ಇತರ ಅನರ್ಹ ಹೆಸರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದು ಈ ವಿಶೇಷ ಸಮಗ್ರ ಪರಿಷ್ಕರಣೆ ಉದ್ದೇಶವಾಗಿದೆ. ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದು, ಪ್ರತಿಯೊಬ್ಬ ಮತದಾರರು ಎಸ್ಐಆರ್ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಬಿಎಲ್ಒಗಳು ಪ್ರತಿ ಮನೆಗೆ ಮೂರು ಬಾರಿ ಭೇಟಿ ನೀಡಲಿದ್ದು, ಹೊಸ ಮತದಾರರ ಸೇರ್ಪಡೆಗೂ ಇದು ಉತ್ತಮ ಅವಕಾಶವಾಗಿದೆ.
ಮುಕಂದ ಸುಮಿ ಸ್ಪೇಷಲ್ ಸ್ಟೀಲ್ ಲಿಮಿಟೆಡ್ ಕಂಪನಿಯ ಆವರಣದಲ್ಲಿ ನಡೆದ ಕಾಲ್ನಡಿಗೆ ಜಾಗೃತಿ ಜಾಥಾದಲ್ಲಿ 150ಕ್ಕೂ ಹೆಚ್ಚು ನೌಕರರು ಪಾಲ್ಗೊಂಡರು. ಬ್ಯಾನರ್ಗಳು ಹಾಗೂ ಜಾಗೃತಿ ಫಲಕಗಳೊಂದಿಗೆ ನಡೆದ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು.
ಕಂಪನಿಯ ಘಟಕದ ಮುಖ್ಯಸ್ಥ ಓಂ ಪ್ರವಲ್ ಸಿಂಗ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಂಜುನಾಥ್ ಕುಲಕರ್ಣಿ, ಅಧಿಕಾರಿಗಳಾದ ಮಾರುತಿ ವೈ., ರಾಜಕುಮಾರ್ ಎಂ.ಜಿ., ಪಿಡಿಒ ಮಂಜುಳಾದೇವಿ ಹೂಗಾರ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಂಪಂ ಕಾರ್ಯದರ್ಶಿ ಮಂಜುನಾಥ ಭಾವಿಕಟ್ಟಿ ಇತರರಿದ್ದರು.