ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಧಾರವಾಡದ ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ?ಐ.ಟಿ.ಐ- ಆಲ್ ಟ್ರೇಡ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಡಿಪ್ಲೊಮಾ ಅಥವಾ ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತ 18 ರಿಂದ 25 ವರ್ಫಿದೊಳಗಿನ ನಿರುದ್ಯೋಗಿ ಪುರಫಿರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.