ನಾಲೆಗೆ 120 ದಿನ ನೀರು ಹರಿಸಿ

ಪರಣ್ಣ ಮುನವಳ್ಳಿ
ಪರಣ್ಣ ಮುನವಳ್ಳಿ
Published on

ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರ ಅನುಕೂಲಕ್ಕಾಗಿ 120 ದಿನಗಳ ಕಾಲ ನೀರು ಹರಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಶಾಸಕ ಪರಣ್ಣ ಮುನವಳ್ಳಿ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು, ಹೊರ ರಾಜ್ಯಗಳಿಗೆ ನೀರು ನಿಗದಿ ಮಾಡಿದ ನಂತರ ರಾಜ್ಯದ ರೈತರನ್ನು ನಿರ್ಲಕ್ಷಿಸುವುದು ಸರಿಯಲ್ಲ. ಕಾಲುವೆಗಳಿಗೆ ನೀರು ಬಿಡುವ ನಿರ್ಧಾರವನ್ನು ಮೊದಲೇ ತೆಗೆದುಕೊಳ್ಳಬೇಕಿತ್ತು. 126ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಾಲುವೆಗಳಿಗೆ ಕೇವಲ 90 ದಿನಗಳಿಗೆ ನೀರು ಬಿಡುವುದಾಗಿ ಸರ್ಕಾರ ನಿರ್ಧರಿಸಿದೆ. ಜಲಾಶಯದಲ್ಲಿ 86 ಟಿಎಂಸಿ ನೀರು ಸಂಗ್ರಹವಾಗಿದ್ದು, ಪಶ್ಚಿಮ ಘಟ್ಟಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗುವುದರ ಬಗ್ಗೆ ಸರ್ಕಾರದ ಗಮನದಲ್ಲಿದ್ದರೂ ಕೇವಲ 90 ದಿನ ನೀರು ಹರಿಸುವ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಸದ್ಯ ಕೆಲ ರೈತರು ಸಸಿ ಮಡಿ ಹಾಕುವ ಹಂತದಲ್ಲಿದ್ದು, ಬೆಳೆಗಳ ರಕ್ಷಣೆಗಾಗಿ 120 ದಿನಗಳ ವರೆಗೂ ನೀರಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net