ಜೀವ ಹಾನಿ ತಡೆಗಟ್ಟಲು ಹೆಲ್ಮೆಟ್ ಧರಿಸಿ

ಕುಷ್ಟಗಿ ಪೊಲೀಸ್ ಠಾಣೆಯಿಂದ ವಿಶೇಷ ಹೆಲ್ಮೆಟ್ ಜಾಗೃತಿ ಅಭಿಯಾನ ನಿಮಿತ್ತ ಬೈಕ್ ರ‌್ಯಾಲಿ ನಡೆಸಲಾಯಿತು.'
ಕುಷ್ಟಗಿ ಪೊಲೀಸ್ ಠಾಣೆಯಿಂದ ವಿಶೇಷ ಹೆಲ್ಮೆಟ್ ಜಾಗೃತಿ ಅಭಿಯಾನ ನಿಮಿತ್ತ ಬೈಕ್ ರ‌್ಯಾಲಿ ನಡೆಸಲಾಯಿತು.'
Published on

ಪ್ರಮುಖ ಮುಖ್ಯಾಂಶಗಳು

  • ಪಿಎಸ್‌ಐ ಹನುಮಂತಪ್ಪ ತಳವಾರ ಹೇಳಿಕೆ
  • ವಿಶೇಷ ಹೆಲ್ಮೆಟ್ ಜಾಗೃತಿ ಅಭಿಯಾನ
ಕುಷ್ಟಗಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಜೀವ ಹಾನಿ ತಡೆಗಟ್ಟಲು ಹೆಲ್ಮೆಟ್ ಧರಿಸುವುದು ಅಗತ್ಯ ಎಂದು ಪಿಎಸ್‌ಐ ಹನುಮಂತಪ್ಪ ತಳವಾರ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಿಂದ ದ್ವಿಚಕ್ರ ವಾಹನ ಸವಾರರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶೇಷ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಜಾಗ್ರತೆಯಿಂದ ಸಂಚರಿಸಬೇಕು. ಜತೆಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದರು.
ನಂತರ ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಹೆಲ್ಮೆಟ್ ಧರಿಸಿ ಸುರಕ್ಷಿತವಾಗಿ ಓಡಿಸಿ, ನಮ್ಮ ಕುಟುಂಬಕ್ಕಾಗಿ, ನಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ, ನಿಯಮ ಪಾಲಿಸಿ ಸುರಕ್ಷಿತವಾಗಿ ಸಂಚರಿಸಿ, ಅಪಘಾತ ರಹಿತ ಸಮಾಜ ನಿರ್ಮಿಸೋಣ ಎಂಬ ಘೋಷಣೆಯೊಂದಿಗೆ ಬೈಕ್ ರ‌್ಯಾಲಿ ನಡೆಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net