ಕೊಪ್ಪಳ ತಾಲೂಕಿನ ಕಲ್ಲತಾವರಗೇರಾ ಗ್ರಾಂಪಂನಿಂದ ನರೇಗಾ ಯೋಜನೆಯಡಿ ಡಿ. ಹೊಸಳ್ಳಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ್ದ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಮಾತನಾಡಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬಸಮ್ಮ ಹುಡೇದ ಸೂಚನೆ
ಋತುಚಕ್ರ ನೈರ್ಮಲ್ಯ ದಿನಾಚರಣೆ
ಕೊಪ್ಪಳ : ಪ್ರತಿಯೊಬ್ಬ ಮಹಿಳೆ ಮಾಸಿಕ ಋತುಚಕ್ರ ಸಂರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಪಂ ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಕರೆ ನೀಡಿದರು.
ತಾಲೂಕಿನ ಕಲ್ಲತಾವರಗೇರಾ ಗ್ರಾಂಪಂನಿಂದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಡಿ. ಹೊಸಳ್ಳಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಶುಕ್ರವಾರ ಆಯೋಜಿಸಿದ್ದ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಟ್ಟಿನ ಸಮಯದಲ್ಲಿ ಮಹಿಳೆಯರ ವೈಯಕ್ತಿಕ ಶುಚಿತ್ವ ಹಾಗೂ ಸ್ಯಾನಿಟರಿ ಪ್ಯಾಡ್ಗಳ ಬಳಕೆ ಹಾಗೂ ಬಳಸಿದ ಪ್ಯಾಡ್ ಗಳನ್ನು ಇನ್ಸಿನರೇಟರ್ ಮೂಲಕ ವೈಜ್ಞಾನಿಕ ನಿರ್ವಹಣೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ನಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೆವೆ. ಮುಟ್ಟನ್ನು ಗುಟ್ಟನ್ನಾಗಿಸದೇ ಮುಟ್ಟನ್ನು ಒಗ್ಗೂಡಿಕೊಂಡು ಆರೋಗ್ಯದ ಬದಲಾವಣೆಗೆ ಮುನ್ನುಡಿ ಬರೆಯೋಣ ಎಂದರು.
ಪ್ರತಿ ಗ್ರಾಂಪಂನಲ್ಲಿ ಬಳಕೆಯಾದ ಪ್ಯಾಡ್ಗಳನ್ನು ಸಂಗ್ರಹಿಸಿ ವೈಜ್ಞಾನಿಕ ನಿರ್ವಹಣೆ ಮಾಡಲು ಇನ್ಸಿನರೆಟರ್ ಅಳವಡಿಸಲಾಗುತ್ತಿದ್ದು, ಮಹಿಳೆಯರು ಪ್ಯಾಡ್ಗಳನ್ನು ಎಲ್ಲಿ ಬೇಕಾದಲ್ಲಿ ಬಿಸಾಡದೇ ಗ್ರಾಂಪಂ ವಾಹನಕ್ಕೆ ನೀಡಬೇಕು ಅಥವಾ ನಿಗದಿಪಡಿಸಿದ ಸ್ಥಳದಲ್ಲಿ ಅವುಗಳನ್ನು ವಿಲೆವಾರಿ ಮಾಡತಕ್ಕದ್ದು. ಬಯಲು ಶೌಚಕ್ಕೆ ಹೋಗುವದರಿಂದ ಶೇ.80 ರಷ್ಟು ರೋಗಗಳು ಹರಡುವ ಸಾಧ್ಯತೆ ಇದೆ. ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ವಾಹನಕ್ಕೆ ನೀಡಬೇಕೆಂದು ಹೇಳಿದರು.
ತಾಪಂ ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ. ಮಾತನಾಡಿ, ಎಲ್ಲಾ ಕೂಲಿಕಾರರು ತಮ್ಮ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿವಹಿಸಿ ನೆಮ್ಮದಿ ಜೀವನ ಸಾಗಿಸಬೇಕು. ಕಾಲ ಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಿ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒತ್ತಡಕ್ಕೆ ಒಳಗಾಗಿ ನಮ್ಮ ದೇಹದ ಆರೋಗ್ಯದಲ್ಲಿ ಏರುಪೇರಾಗುವದನ್ನು ಕಾಣಬಹುದು. ಆ ದಿಸೆಯಲ್ಲಿ ಕ್ರಮಬದ್ದವಾದ ಆಹಾರ, ಆರೋಗ್ಯ ಕಾಳಜಿಯೊಂದಿಗೆ ಕೆಲಸ ನಿರ್ವಹಿಸುವದರಿಂದ ದೇಹದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾಗುವದಿಲ್ಲ ಎಂದರು.