ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಮಾತನಾಡಿ, ಮಕ್ಕಳ ರಕ್ಷಣಾ ನೀತಿ 2016 ಪರಿಷತ-&2022ರ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಪ್ರತಿಯೊಂದು ಶಾಲೆ, ಕಾಲೇಜು ತನ್ನದೇ ಆದ ಲಿಖಿತ ಮಕ್ಕಳ ರಕ್ಷಣಾ ನೀತಿ ಹೊಂದಿರಬೇಕು. ಶಾಲಾ ಆವರಣದಲ್ಲಿ ದೈಹಿಕ, ಮಾನಸಿಕ, ಲೈಂಗಿಕ, ಭಾವನಾತ್ಮಕ ಹಿಂಸೆ, ಬೆದರಿಕೆ, ರ್ಯಾಗಿಂಗ್ ಹಾಗೂ ತಾರತಮ್ಯಕ್ಕೆ ಅವಕಾಶ ನೀಡಬಾರದು. ಶಿಕ್ಷಕರು, ಚಾಲಕರು, ಸಹಾಯಕ ಸಿಬ್ಬಂದಿ ಸೇರಿದಂತೆ ಮಕ್ಕಳೊಂದಿಗೆ ಕೆಲಸ ಮಾಡುವ ಎಲ್ಲರ ಪೊಲೀಸ್ ಹಿನ್ನೆಲೆ ಪರಿಶೀಲನೆ ಪಡೆದುಕೊಳ್ಳಬೇಕು ಸಮಾಲೋಚನೆ ಅಗತ್ಯವಿರುವ ಮಕ್ಕಳಿಗೆ ಮಾನಸಿಕ ಆರೋಗ್ಯ ಮತ್ತು ಸಮಾಲೋಚನಾ ಸೇವೆಗಳನ್ನು ಒದಗಿಸಬೇಕು ಎಂದರು.