ಯೋಜನೆಗಳ ಅನುಷ್ಠಾನಕ್ಕೆ ಸಮನ್ವಯದಿಂದ ಕೆಲಸ ಮಾಡಿ

ಕೊಪ್ಪಳ ತಾಪಂ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್​ ಎಸ್​. ಮಾತನಾಡಿದರು. ತಾಪಂ ಇಒ ದುಂಡಪ್ಪ ತುರಾದಿ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಿದ್ದರು.
ಕೊಪ್ಪಳ ತಾಪಂ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್​ ಎಸ್​. ಮಾತನಾಡಿದರು. ತಾಪಂ ಇಒ ದುಂಡಪ್ಪ ತುರಾದಿ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲಚಂದ್ರನ್​ ಎಸ್​ ಸೂಚನೆ
  • ಗ್ಯಾರಂಟಿ ಪ್ರಗತಿ ಪರಿಶೀಲನ ಸಭೆ
ಕೊಪ್ಪಳ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಾಲೂಕ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್​ ಎಸ್​ ಹೇಳಿದರು.
ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ನಿಯಂತ್ರಣ ಫಲಕದಲ್ಲಿ ಮಾಹಿತಿ ನವೀಕರಿಸದಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ಸರಿಪಡಿಸಬೇಕು. ಐಟಿ, ಜಿಎಸ್​ಟಿ ನೋಂದಣಿ ಹೊಂದಿರುವ ಫಲಾನುಭವಿಗಳು ಅನರ್ಹರಾಗಿರುವ ಬಗ್ಗೆ ಉಂಟಾದ ಸಮಸ್ಯೆಯನ್ನು ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ.
ಗೃಹಲಕ್ಷ್ಮಿ ಫಲಾನುಭವಿಯ ಮರಣ ಸಂಭವಿಸಿದಲ್ಲಿ ಸಂಬಂಧಿತ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿಯನ್ನು ಗ್ರಾಂಪಂಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಂಪಂವಾರು ವಿವರ ಸಲ್ಲಿಸುವಂತೆ ಜೆಸ್ಕಾಂ ಇಲಾಖೆಗೆ ತಿಳಿಸಿದರು.
ವಿದ್ಯುತ್​ ಮಾರ್ಗಗಳಲ್ಲಿ ಜಂಗಲ್​ ಕಟಿಂಗ್​, ಮಳೆಗಾಲದ ಮುನ್ನ ದುರಸ್ತಿ ಕಾರ್ಯ, 11 ಕೆವಿ ಮಾರ್ಗ ಬದಲಾವಣೆ. ಪಡಿತರ ಧಾನ್ಯ ಕಳ್ಳ ಸಾಗಾಣಿಕೆ ತಡೆಗಟ್ಟಲು ಕಠಿಣ ನಿಗಾವಹಿಸಿ, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರ ನಡೆಸಿ ನಿರುದ್ಯೋಗ ಯುವಕರಿಗೆ ಸೌಲಭ್ಯ ತಲುಪಿಸಿ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಇಒ ದುಂಡಪ್ಪ ತುರಾದಿ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಜ್ಯೋತಿ ಗೊಂಡಬಾಳ, ಅನ್ವರ್​ ಹುಸೇನ ಗಡಾದ, ಮಾನ್ವಿ ಪಾಶಾ, ಅನ್ನದಾನಯ್ಯಸ್ವಾಮಿ, ರಾಮಣ್ಣ ಚೌಡ್ಕಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net