ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸಿ

ಕುಷ್ಟಗಿಯಲ್ಲಿ ಬಣಜಿಗ ಸಮಾಜದ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯ ಕಾರ್ಯದರ್ಶಿ ಶಿವಾನಂದ ಬಿದರಿ ಉದ್ಘಾಟಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಸಮಾಜದ ತಾಲೂಕು ಅಧ್ಯಕ್ಷ ಶಶಿಧರ ಕವಲಿ, ಜಿಲ್ಲಾಧ್ಯಕ್ಷ ವೀರೇಶ ಬಂಗಾರಶೆಟ್ಟರ್ ಇತರರಿದ್ದರು.
ಕುಷ್ಟಗಿಯಲ್ಲಿ ಬಣಜಿಗ ಸಮಾಜದ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯ ಕಾರ್ಯದರ್ಶಿ ಶಿವಾನಂದ ಬಿದರಿ ಉದ್ಘಾಟಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಸಮಾಜದ ತಾಲೂಕು ಅಧ್ಯಕ್ಷ ಶಶಿಧರ ಕವಲಿ, ಜಿಲ್ಲಾಧ್ಯಕ್ಷ ವೀರೇಶ ಬಂಗಾರಶೆಟ್ಟರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಣಜಿಗ ಸಮಾಜ ರಾಜ್ಯ ಕಾರ್ಯದರ್ಶಿ ಶಿವಾನಂದ ಬಿದರಿ ಹೇಳಿಕೆ
  • ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಷ್ಟಗಿ: ಸಾಮರ್ಥ್ಯ ಮತ್ತು ಸಂಘಟನೆಯ ಬಲದಿಂದ ಮಾದರಿ ಸಮಾಜ ನಿರ್ಮಿಸಬೇಕು. ಸಮಾಜಕ್ಕೆ ಅನ್ಯಾಯವಾಗಲು ಅವಕಾಶ ನೀಡಬಾರದು ಎಂದು ಬಣಜಿಗ ಸಮಾಜದ ರಾಜ್ಯ ಕಾರ್ಯದರ್ಶಿ ಶಿವಾನಂದ ಬಿದರಿ ಹೇಳಿದರು.
ಪಟ್ಟಣದ ಕೊಪ್ಪಳ ರಸ್ತೆಯ ಎನ್‌ಸಿಎಚ್ ಪ್ಯಾಲೇಸ್ ಹಾಲ್‌ನಲ್ಲಿ ಶುಕ್ರವಾರ ಬಣಜಿಗ ಸಮಾಜದ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ. ಪದಾಧಿಕಾರಿಗಳು ಶಾಶ್ವತ ಅಲ್ಲ ಸಂಘಟನೆ ಶಾಶ್ವತ. ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸಮಾಜದ ರಾಜ್ಯ ಸಂಘಟನೆಯ ಮೂಲ ಕೊಪ್ಪಳ ಜಿಲ್ಲೆಯಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಬಣಜಿಗ ಸಮಾಜದ ಅಭಿವೃದ್ಧಿಗೆ ಯುವಕರು ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾಭ್ಯಾಸ, ಉದ್ಯೋಗ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ತೊಡಗಿ ಸಮಾಜದ ಗೌರವ ಎತ್ತರಕ್ಕೆ ಕೊಂಡೊಯ್ಯಬೇಕು. ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನಿಂದ ಸಂಘಟನೆ ಬಲಪಡಿಸಬೇಕು. ಇದರಿಂದ ಸಮಾಜದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯುತ್ತದೆ ಎಂದು ತಿಳಿಸಿದರು. ತಾಲೂಕು ಅಧ್ಯಕ್ಷ ಶಶಿಧರ ಕವಲಿ ಮಾತನಾಡಿ, ಜೂ.27ರಂದು ಬಣಜಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಮಾಜದ ಜಿಲ್ಲಾಧ್ಯಕ್ಷ ವೀರೇಶ ಬಂಗಾರಶೆಟ್ಟರ್, ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ರೋಡಗಿ, ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ, ತಾಲೂಕಾಧ್ಯಕ್ಷ ಶಶಿಧರ ಕವಲಿ, ನಗರ ಘಟಕ ಅಧ್ಯಕ್ಷ ವೀರೇಶ ಕಲಕಬಂಡಿ, ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಪಟ್ಟಣಶೆಟ್ಟಿ, ಸಮಾಜದ ಮಾಜಿ ಅಧ್ಯಕ್ಷ ವಿಶ್ವನಾಥ ಕನ್ನೂರು, ಪ್ರಮುಖರಾದ ಸಂಗಪ್ಪ ಕಡಿವಾಲ್, ಪ್ರಭಾ ಬಂಗಾರಶೆಟ್ಟರ, ಬಸಟೆಪ್ಪ ಕುಂಬಳಾವತಿ, ಸಂಗಣ್ಣ ಟೆಂಗಿನಕಾಯಿ, ಮುದುಕಪ್ಪ ಜಿಗಜಿನ್ನಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net