ಕಾರ್ಯಾಗಾರ ಸದ್ಬಳಕೆ ಮಾಡಿಕೊಳ್ಳಲಿ

ಗಂಗಾವತಿ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ಲೇಸ್‌ಮೆಂಟ್ ಘಟಕದಿಂದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕಂಪನಿ ಸೆಕ್ರೆಟರಿ ಕೋರ್ಸ್‌ನ ಕುರಿತು ಒಂದು ದಿನದ ಕಾರ್ಯಗಾರದಲ್ಲಿ  ಸಂಪನ್ಮೂಲ ವ್ಯಕ್ತಿ ಸಿ.ಎಸ್.ಚಂದನ್‌ರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ್, ಪ್ಲೇಸ್‌ಮೆಂಟ್ ಘಟಕದ ಸಂಚಾಲಕ ಅಶ್ರ್ ಅಳ್ಳಳ್ಳಿ, ಸಹಾಯಕ ಪ್ರಾಧ್ಯಾಪಕರಾದ ಕೆ.ರವಿಕುಮಾರ, ಅಕ್ಕಿ ಮಾರುತಿ ಇತರರಿದ್ದರು.

Published on
ಗಂಗಾವತಿ: ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ಲೇಸ್‌ಮೆಂಟ್ ಘಟಕದಿಂದ ಪದವಿ ವಿದ್ಯಾರ್ಥಿಗಳಿಗಾಗಿ ಕಂಪನಿ ಸೆಕ್ರೆಟರಿ ಕೋರ್ಸ್ ಕುರಿತು ಒಂದು ದಿನದ ಕಾರ್ಯಾಗಾರ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿನ ಐಸಿಎಸ್‌ಐ ಚಾಪ್ಟರ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿ ಸಿ.ಎಸ್.ಚಂದನ್ ಮಾಹಿತಿ ನೀಡಿದರು. ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ್ ಮಾತನಾಡಿ, ಕಾರ್ಯಾಗಾರವನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪ್ಲೇಸ್‌ಮೆಂಟ್ ಘಟಕದ ಸಂಚಾಲಕ ಅಶ್ರ್ ಅಳ್ಳಳ್ಳಿ ಪ್ರಾಸ್ತಾವಿಕ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕರಾದ ಕೆ.ರವಿಕುಮಾರ, ಕೆ.ಅನಿತಾ, ಬಿ.ಣಿರಾಜ, ಅಕ್ಕಿ ಮಾರುತಿ, ಶಿವಕುಮಾರ ಉಪವಾಸಿ,ಡಾ.ಅಶೋಕ, ಮಲ್ಲಿಕಾರ್ಜುನ ಇತರರಿದ್ದರು.
ವಿಚಾರ ಸಂಕಿರಣ: ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದಿಂದ ಕನ್ನಡದಲ್ಲಿ ಕೃಷಿ ಸಾಹಿತ್ಯ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದ ಸಂಯೋಜಕಿ ಡಾ.ಮುಮ್ತಾಜ್ ಬೇಗಂ ಮಾತನಾಡಿದರು. ವಿದ್ಯಾರ್ಥಿ ಮಲ್ಲೇಶ ಬಂಕಾಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಅತಿಥಿ ಉಪನ್ಯಾಸಕರಾದ ಗುಂಡೂರು ಪವನ್ ಕುಮಾರ್, ಡಾ.ಬಸವರಾಜ ಗೌಡನಬಾವಿ, ಡಾ.ಪಾಗುಂಡಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net