ಯುವಶಕ್ತಿ ದೇಶದ ಆಸ್ತಿ

ಗಂಗಾವತಿ ಸರ್ಕಾರಿ ಉರ್ದು ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ, ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮೇಘಾ ಸೋಮಣ್ಣನವರ್, ವಕೀಲರ ಸಂಘದ ಕಾರ್ಯದರ್ಶಿ ಎಚ್.ಎಂ. ಮಂಜುನಾಥ ಉಪಸ್ಥಿತರಿದ್ದರು.

Published on
ಗಂಗಾವತಿ: ನಗರದ ಸರ್ಕಾರಿ ಉರ್ದು ಮಾಧ್ಯಮ ಪ್ರೌಢ ಶಾಲೆಯಲ್ಲಿ ಕಾನೂನು ಸೇವಾ ಸಮಿತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ನಿಮಿತ್ತ ಕಾನೂನು ಅರಿವು-ನೆರವು ಕಾರ್ಯಾಗಾರ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
 ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಮಾತನಾಡಿ, ಯುವ ಶಕ್ತಿ ದೇಶದ ಆಸ್ತಿಯಾಗಿದ್ದು, ಯುವಕರು ಕಾನೂನಿನ ಅರಿವು ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು. ಕಾರ್ಯಾಗಾರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಯಿತು. ಜೆಎಂಎಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮೇಘಾ ಸೋಮಣ್ಣನವರ್, ವಕೀಲರ ಸಂಘದ ಕಾರ್ಯದರ್ಶಿ ಎಚ್.ಎಂ. ಮಂಜುನಾಥ, ಖಜಾಂಚಿ ಪುಷ್ಪಾ ಶ್ರೀನಿವಾಸ, ಮುಖ್ಯಶಿಕ್ಷಕ ಎಂ.ಬಿ. ಕೊಪ್ಪಳ, ಶಿಕ್ಷಕಿ ಸುಮಂಗಲಮ್ಮ, ಎಸ್ಡಿಎಂಸಿ ಅಧ್ಯಕ್ಷ ಮೊಹಮ್ಮದ್ ಸಾಬ್ ದಳಪತಿ ಇತರರು ಉಪಸ್ಥಿತರಿದ್ದರು.
ನಗರದ ಉಳ್ಳಿಡಗ್ಗಿಯ ಎಸ್‌ಕೆಆರ್‌ಯು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ರಾಷ್ಟ್ರೀಯ ಯುವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯ ಪ್ರೊ. ಶಿವಾನಂದ ಮೇಟಿ ಮಾತನಾಡಿ, ಯುವಜನತೆ ಭೌತಿಕವಾಗಿ ಮಾತ್ರವಲ್ಲದೆ, ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಬಲಶಾಲಿಯಾಗುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು. ಉಪನ್ಯಾಸಕರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net