ರೇಬಿಸ್ ನಿರ್ಲಕ್ಷಿಸದೆ ತಕ್ಷಣ ಚಿಕಿತ್ಸೆ ಪಡೆಯಿರಿ

ಕರಮುಡಿ ಗ್ರಾಮದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ನಾಗರಡ್ಡಿ ಮಾತನಾಡಿದರು.
ಕರಮುಡಿ ಗ್ರಾಮದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ನಾಗರಡ್ಡಿ ಮಾತನಾಡಿದರು.
Published on: 

ಯಲಬುರ್ಗಾ: ಯಾವುದೇ ಪ್ರಾಣಿ ಕಚ್ಚಿದ ಬಳಿಕ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳನ್ನು ಅವಲಂಬಿಸದೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಲಸಿಕೆ ಪಡೆಯಬೇಕು ಎಂದು ಟಿಎಚ್‌ಒ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಡಾ. ವಿದ್ಯಾ ಸಿ. ನಾಗರಡ್ಡಿ ಹೇಳಿದರು.

ಕರಮುಡಿ ಗ್ರಾಮದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಮುದಾಯ ಮಟ್ಟದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಯಿ, ಬೆಕ್ಕು ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದರೂ ನಿರ್ಲಕ್ಷಿಸದೆ ಕೂಡಲೇ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯಬೇಕು. ಇದರಿಂದ ರೇಬಿಸ್ ಮೂಲಕ ಉಂಟಾಗುವ ಅಪಾಯ ತಡೆಯಲು ಸಾಧ್ಯವಾಗುತ್ತದೆ ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಭುರಾಜ ಎಚ್. ಮಾತನಾಡಿ, ರೇಬಿಸ್ ಕಾಯಿಲೆ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಾಗಿದೆ. ಪ್ರಾಣಿ ಕಚ್ಚಿದ ಸಂದರ್ಭದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಯಾವುದನ್ನು ಮಾಡಬಾರದು ಎಂಬುದರ ಕುರಿತು ತಿಳಿಯಬೇಕು ಎಂದರು.

ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶೋಭಾ ಪತ್ತಾತ್, ಕಳಕಮ್ಮ ಪೂಜಾರ, ಮುತ್ತಣ್ಣ ಪಾಟೀಲ್, ಶರಣಪ್ಪ ಕುರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net